ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಾದರಿ ಕೈತೋಟ ನಿರ್ಮಾಣಕ್ಕೆ ಸಿದ್ಧತೆ

Published 19 ಜುಲೈ 2023, 13:48 IST
Last Updated 19 ಜುಲೈ 2023, 13:48 IST
ಅಕ್ಷರ ಗಾತ್ರ

ಹಿರಿಯೂರು: ಮಕ್ಕಳಿಗೆ ಕೃಷಿ ಚಟುವಟಿಕೆಗಳನ್ನು ಪರಿಚಯಿಸಲು ಹಾಗೂ ಪೋಷಕಾಂಶಯುಕ್ತ ಆಹಾರ ಉತ್ಪಾದಿಸುವ ಉದ್ದೇಶದೊಂದಿಗೆ ತಾಲ್ಲೂಕಿನ ಪಿಲ್ಲಾಜನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದರಿ ಕೈತೋಟ ನಿರ್ಮಾಣಕ್ಕೆ ಶಿಕ್ಷಕರು–ವಿದ್ಯಾರ್ಥಿಗಳು ಮುಂದಾಗಿದ್ದಾರೆ.

ಪಿಎಂ ಪೋಷಣ್ ಅಭಿಯಾನ ಕಾರ್ಯಕ್ರಮದಡಿ ಚಿತ್ರದುರ್ಗ ಡಯಟ್‌ನ ಹಿರಿಯ ಉಪನ್ಯಾಸಕ ಎಸ್.ಸಿ. ಪ್ರಸಾದ್, ಕ್ಷೇತ್ರ ಸಮನ್ವಯ ಅಧಿಕಾರಿ ಈ. ತಿಪ್ಪೇರುದ್ರಪ್ಪ ಬುಧವಾರ ಮಾದರಿ ಕೈತೋಟ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು.

ಕೈತೋಟದ ಬಗ್ಗೆ ಮಾಹಿತಿ ನೀಡಿದ ಮುಖ್ಯಶಿಕ್ಷಕ ಆರ್.ಟಿ.ಎಸ್. ಶ್ರೀನಿವಾಸ್, ‘ಟೊಮೆಟೊ, ಬದನೆ, ಮೆಣಸಿನಕಾಯಿ, ಹೀರೆಕಾಯಿ, ಬೆಂಡೆ, ಜವಳಿ, ಮೂಲಂಗಿ, ಕ್ಯಾರೆಟ್, ಬೀನ್ಸ್, ಸೌತೆ, ಶೇಂಗಾ, ಅಲಸಂದೆ, ಈರುಳ್ಳಿ, ಪಾಲಕ್ ಸೊಪ್ಪು, ಮೆಂತ್ಯ ಸೊಪ್ಪು, ಸಬ್ಬಸಿಗೆ, ನುಗ್ಗೆ, ಕೊತ್ತುಂಬರಿ ಸೊಪ್ಪು, ಕಲ್ಲಂಗಡಿ, ಮಾವು, ಪಪ್ಪಾಯ, ಹಲಸು, ಕಬ್ಬು, ತೆಂಗು, ಅಡಿಕೆ, ಬಾಳೆ, ನೇರಳೆ, ನಿಂಬೆ, ವಿವಿಧ ಹೂವಿನ ಗಿಡಗಳು ಮತ್ತು ನೆರಳಿನ ಮರಗಳನ್ನು ಬೆಳೆಸಲಾಗುತ್ತಿದೆ. ಹನಿ ನೀರಾವರಿ ಅಳವಡಿಸಿದ್ದು, ಶಾಲಾಭಿವೃದ್ಧಿ ಸಮಿತಿಯವರು, ಶಿಕ್ಷಕರು, ಗ್ರಾಮದ ರೈತರು ಕೈಜೋಡಿಸಿದ್ದಾರೆ. ವಿದ್ಯಾರ್ಥಿಗಳಂತೂ ಬಿಡುವಿನ ವೇಳೆಯಲ್ಲಿ ಹೊಸದಾಗಿ ನಾಟಿ ಮಾಡಿರುವ ಗಿಡಗಳು ಬೆಳೆಯುವುದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಅರಣ್ಯ ಮತ್ತು ತೋಟಗಾರಿಕೆ ಇಲಾಖೆ ಸಹಕಾರ ಮರೆಯುವಂತಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT