ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕಿಂಗ್‌ ಕ್ಷೇತ್ರ ಪ್ರವೇಶಕ್ಕೆ ಡಿಸಿ ಸಲಹೆ

ಬಾಲಕಿಯರಿಗೆ ವಿದ್ಯಾರ್ಥಿ ವೇತನ ವಿತರಣೆ
Last Updated 5 ಫೆಬ್ರುವರಿ 2020, 13:44 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯ ವಿದ್ಯಾರ್ಥಿಗಳು ಬ್ಯಾಂಕಿಂಗ್‌ ಕ್ಷೇತ್ರದತ್ತ ಹೆಚ್ಚು ಒಲವು ಮೂಡಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವಂತೆ ತರಬೇತಿ ನೀಡಲು ಕಾರ್ಯಾಗಾರ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಸಲಹೆ ನೀಡಿದರು.

ಇಲ್ಲಿನ ತರಾಸು ರಂಗಮಂದಿರದಲ್ಲಿ ಕೆನರಾ ವತಿಯಿಂದ ಬುಧವಾರ ಏರ್ಪಡಿಸಿದ್ದ ‘ಕೆನರಾ ವಿದ್ಯಾಜ್ಯೋತಿ ವಿದ್ಯಾರ್ಥಿ ವೇತನ ವಿತರಣೆ’ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳಿಗೆ ಸರ್ಕಾರ ಹಲವು ರೀತಿಯ ಸೌಲಭ್ಯ ಕಲ್ಪಿಸಿದೆ. ವಿದ್ಯಾರ್ಥಿ ವೇತನ, ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ ಸೇರಿ ಹಲವು ಸೌಲಭ್ಯ ಒದಗಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಜಿಲ್ಲೆಯ ಮಕ್ಕಳಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಲೋಚನೆ ಮಾಡುವುದು ಒಳಿತು’ ಎಂದು ಹೇಳಿದರು.

‘ಖಾಸಗಿ ಕಂಪನಿ, ಸಾರ್ವಜನಿಕ ಉದ್ದಿಮೆಗಳು ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಅನುದಾನವನ್ನು ಅಭಿವೃದ್ಧಿಗೆ ವಿನಿಯೋಗಿಸಬೇಕು. ಈ ಕಾರ್ಯದಿಂದ ಜಿಲ್ಲೆಯ ಜನರಿಗೆ ನೆರವಾಗಬೇಕು’ ಎಂದರು.

ಕೆನರಾ ಬ್ಯಾಂಕ್‌ ದಾವಣಗೆರೆ ಕ್ಷೇತ್ರಿಯ ಕಚೇರಿಯ ಸಹಾಯಕ ಮಹಾ ಪ್ರಬಂಧಕ ಎಚ್‌.ರಘುರಾಜ್‌, ‘ಮಹಿಳೆ ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ವಿದ್ಯೆಗೆ ಎಲ್ಲವನ್ನು ಜಯಿಸುವ ಶಕ್ತಿ ಇದೆ. ಬಾಲಕಿಯರು ಶಿಕ್ಷಣದಿಂದ ಹೊರ ಉಳಿಯಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಡಿಡಿಪಿಐ ಕೆ.ರವಿಶಂಕರ್‌ ರೆಡ್ಡಿ, ‘ದೇಶದ ಭವಿಷ್ಯ ಶಾಲೆಗಳ ಕೊಠಡಿಯಲ್ಲಿ ಅಡಗಿದೆ. ಮಕ್ಕಳು ಉತ್ತಮ ಶಿಕ್ಷಣ ಪಡೆದರೆ ದೇಶ ಬದಲಾಗುತ್ತದೆ. ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಆದರ್ಶಗಳನ್ನು ಮಹನೀಯರು ಮೈಗೂಡಿಸಿಕೊಳ್ಳಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ ಉತ್ತಮ ಸಾಧನೆ ತೋರಬೇಕು’ ಎಂದು ಕಿವಿಮಾತು ಹೇಳಿದರು.

ಜಿಲ್ಲೆಯ 47 ಶಾಲೆಗಳ 123 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ನಿಂಗೇಗೌಡ, ಕೆನರಾ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ ನಾಗರತ್ನಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT