ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಅಲೆಯಲ್ಲಿ ಉತ್ತಮ ಕಾರ್ಯ ಡಾ.ಕೆ.ನಂದಿನಿದೇವಿ

Last Updated 1 ಆಗಸ್ಟ್ 2021, 2:15 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಕೋವಿಡ್ ಎರಡನೇ ಅಲೆ ವೇಳೆ ಹಲವು ಗ್ರಾಮಗಳಲ್ಲಿ ಸಂಚರಿಸಿ, ಜನರಲ್ಲಿ ಜಾಗೃತಿ ಮೂಡಿಸಿದ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್ ಪಾತ್ರ ಅಪಾರ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ನಂದಿನಿದೇವಿ ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ಜಿಲ್ಲಾ ಸಂಸ್ಥೆಯಿಂದ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಸಿದ ಕೋವಿಡ್ ಜಾಗೃತಿ ಅಭಿಯಾನ ಸಮಗ್ರ ವರದಿ ಮಂಡನೆ ಹಾಗೂ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕೋವಿಡ್ ಲಸಿಕೆ ಕುರಿತು ಜನರಲ್ಲಿ ಇದ್ದಂಥ ಅಪನಂಬಿಕೆ, ಮೌಢ್ಯ ಹೋಗಲಾಡಿಸಿ ಮೂರು ತಿಂಗಳ ಕಾಲ ಜಿಲ್ಲಾಡಳಿತದ
ಜೊತೆಗೆ ಕೈಜೋಡಿಸಿರುವುದು ಮೆಚ್ಚುಗೆಯ ಸಂಗತಿ’ ಎಂದ ಅವರು, ‘ಅದೇ ರೀತಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಿರುವ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲು ಮುಂದಾಗಬೇಕು’ ಎಂದು ಸಲಹೆ
ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ಹಿರಿಯ ಪತ್ರಕರ್ತ ಜಿ.ಎಸ್. ಉಜ್ಜಿನಪ್ಪ, ಸ್ಕೌಟ್ಸ್‌ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪಿ.ವೈ.ದೇವರಾಜ್ ಪ್ರಸಾದ್, ಜಿಲ್ಲಾ ಗೈಡ್ ಸಮಿತಿಯ ಸುನಿತಾ ಮಲ್ಲಿಕಾರ್ಜುನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT