ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಗಳ ಶ್ರದ್ಧಾಂಜಲಿ; ಸರಳ ಆಚರಣೆ

Last Updated 23 ಸೆಪ್ಟೆಂಬರ್ 2019, 9:49 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಜ್ಯದಲ್ಲಿ ನೆರೆ ಹಾಗೂ ಬರ ಪರಿಸ್ಥಿತಿ ಇರುವ ಕಾರಣ ಸಿರಿಗೆರೆಯ ತರಳಬಾಳು ಬೃಹನ್ಮಠದ ಲಿ. ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 27ನೇ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಸೆ. 24ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನದವರೆಗೂ ಸರಳವಾಗಿ ಆಚರಿಸಲಾಗುತ್ತಿದೆ.

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸುವ ಸಾಧ್ಯತೆ ಇದೆ.

ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಶ್ರೀಮಠದ ಭಕ್ತರು ಬರುವ ನಿರೀಕ್ಷೆ ಇದ್ದು, ಅನ್ನ ದಾಸೋಹಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ, ಸಂಸದರಾದ ಬಿ.ವೈ. ರಾಘವೇಂದ್ರ, ಎ. ನಾರಾಯಣಸ್ವಾಮಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್‌.ಎ. ರವೀಂದ್ರನಾಥ್, ಜಿ.ಎಚ್‌. ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಎಂ.ಪಿ. ರೇಣುಕಾಚಾರ್ಯ, ಮಾಜಿ ಸಚಿವ ಎಚ್‌. ಆಂಜನೇಯ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT