ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಢನಂಬಿಕೆ ವಿರುದ್ಧ ಶಂಕರಾಚಾರ್ಯ ಧ್ವನಿ

ಹೆಚ್ಚುವರಿ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಅಭಿಮತ
Last Updated 17 ಮೇ 2021, 12:09 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಮಾಜದಲ್ಲಿ ಬೇರೂರಿದ್ದ ಮೂಢನಂಬಿಕೆ ಹಾಗೂ ಕಂದಾಚಾರಗಳ ವಿರುದ್ಧ ಶಂಕರಾಚಾರ್ಯರು ಧ್ವನಿ ಎತ್ತಿದ್ದರು. ಭಾರತೀಯ ಸಮಾಜದ ಸುಧಾರಣೆಯಲ್ಲಿ ಅವರು ಪ್ರಮುಖ ಪಾತ್ರವಹಿಸಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಶಂಕರಾಚಾರ್ಯ ಜಯಂತಿಯ ಸರಳ ಆಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ಮಹನೀಯರ, ದಾರ್ಶನಿಕರ ಚಿಂತನೆ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ತೋರಿದ ದಾರಿಯಲ್ಲಿ ಸಾಗಬೇಕು. ಮಹನೀಯರ ಜಯಂತಿಗಳ ಆಚರಣೆಯಿಂದ ಮೌಲ್ಯಯುತ ಹಾಗೂ ಅರ್ಥಪೂರ್ಣ ಸಂದೇಶಗಳು ಸಮಾಜಕ್ಕೆ ತಲುಪಲು ಸಾಧ್ಯ. ಶಂಕರಾಚಾರ್ಯರ ತತ್ವಾದರ್ಶಗಳು ಸಮಾಜಕ್ಕೆ ಮಾದರಿ’ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಧನಂಜಯ ಮಾತನಾಡಿ, ‘ಶಂಕರಾಚಾರ್ಯರು ದೇಶದ ಎಲ್ಲೆಡೆ ಸಂಚರಿಸಿ ಅದ್ವೈತ ಸಿದ್ಧಾಂತ ಪ್ರಚಾರ ಮಾಡಿದರು. ಉತ್ತಮ ಬದುಕಿಗೆ ಶಂಕರಾಚಾರ್ಯರ ಸಂದೇಶಗಳು ಮಾರ್ಗದರ್ಶಕ. ಅವರ ತತ್ವ, ಸಿದ್ದಾಂತಗಳು ಸಾರ್ವಕಾಲಿಕ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT