ಗುರುವಾರ , ಜುಲೈ 29, 2021
27 °C

ಅ.6ರಿಂದ 17ರವರೆಗೆ ಶರಣ ಸಂಸ್ಕೃತಿ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಪ್ರಸಕ್ತ ವರ್ಷದ ಶರಣ ಸಂಸ್ಕೃತಿ ಉತ್ಸವವನ್ನು ಅ.6ರಿಂದ 17ರವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಮಠದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಭಕ್ತರ ಅಭಿಪ್ರಾಯದಂತೆ ಈ ಬಾರಿಯ ಉತ್ಸವದಲ್ಲಿ ವಿಶೇಷ ಪ್ರವಚನ, ವೀರಗಾಸೆ, ಭಜನೆ, ಜಾನಪದ ಸ್ಪರ್ಧೆಗಳು ಹಾಗೂ 75ನೇ ಸ್ವಾತಂತ್ರೋತ್ಸವದ ಸವಿನೆನಪಿನಲ್ಲಿ ಇಡೀ ಉತ್ಸವವು ಅತ್ಯಂತ ರಚನಾತ್ಮಕವಾಗಿ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಾಂಕೇತಿಕ ಕ್ರೀಡಾಕೂಟ, ಸ್ಥಳೀಯ ಕಲಾವಿದರಿಗೆ ಅವಕಾಶ, ಸಿನಿಮಾ ನಟ–ನಟಿಯರನ್ನು ಆಹ್ವಾನಿಸುವ ಬಗ್ಗೆ, ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಸ್ಮಾರಕದಲ್ಲಿ ಒಂದು ಕಾರ್ಯಕ್ರಮ ಆಯೋಜಿಸುವ ಬಗ್ಗೆ, ವಿವಿಧ ಮಠಾಧೀಶರನ್ನು ಆಹ್ವಾನಿಸುವ ಕುರಿತು ಚರ್ಚೆಗಳು ನಡೆದವು.

ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ, ಶ್ರೀಕೃಷ್ಣಯಾದವಾನಂದ ಸ್ವಾಮೀಜಿ, ಛಲವಾದಿ ಗುರುಪೀಠದ ಬಸವನಾಗೀದೇವ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಶಿರಸಿ ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಹಾವೇರಿ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ಚಳ್ಳಕೆರೆಯ ಬಸವಕಿರಣ ಸ್ವಾಮೀಜಿ, ತಿಪ್ಪೇರುದ್ರ ಸ್ವಾಮೀಜಿ, ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ಎಲ್.ಬಿ. ರಾಜಶೇಖರ್, ತಾಜಪೀರ್, ಫಾತ್ಯರಾಜನ್, ನಿರಂಜನಮೂರ್ತಿ, ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್.ನವೀನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು