ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: ದೋಷಾರೋಪ ಮರುನಿಗದಿ, ವಿಚಾರಣೆ ಆರಂಭ

Published 31 ಮೇ 2024, 13:09 IST
Last Updated 31 ಮೇ 2024, 13:09 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದಾಖಲಾದ ಮೊದಲ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ ದೋಷಾರೋಪಪಟ್ಟಿಯ ಮರುನಿಗದಿ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಲ್ಲಿ ಶುಕ್ರವಾರ ನಡೆಯಿತು.

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಮೊದಲ ಆರೋಪಿ ಶಿವಮೂರ್ತಿ ಶರಣರು, ಎರಡನೇ ಆರೋಪಿ ಹಾಸ್ಟೆಲ್‌ ವಾರ್ಡನ್‌ ರಶ್ಮಿ ಹಾಗೂ ಮೂರನೇ ಆರೋಪಿ ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯ ವಿರುದ್ಧದ ದೋಷಾರೋಪ ನಿಗದಿಪಡಿಸಲಾಯಿತು. ಈ ದೋಷಾರೋಪಗಳನ್ನು ಆರೋಪಿಗಳು ‘ಶುದ್ಧ ಸುಳ್ಳು’ ಎಂದು ನಿರಾಕರಿಸಿದರು.

ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಎರಡು ದೋಷಾರೋಪಪಟ್ಟಿಗಳನ್ನು ಸಲ್ಲಿಸಿದ್ದರು. ಸೆಷನ್ಸ್‌ ನ್ಯಾಯಾಲಯ ಈ ಮೊದಲು ನಿಗದಿಪಡಿಸಿದ ದೋಷಾರೋಪವನ್ನು ರದ್ದುಪಡಿಸುವಂತೆ ಕೋರಿ ಶಿವಮೂರ್ತಿ ಶರಣರು ಹೈಕೋರ್ಟ್‌ ಮೊರೆ ಹೋಗಿದ್ದರು.

ಪರಿಶಿಷ್ಟ ಜಾತಿ, ಪಂಗಡದ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯ ಮೇಲಿನ ಆರೋಪಗಳನ್ನು ನ್ಯಾಯಾಲಯ ಕೈಬಿಟ್ಟಿತ್ತು. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ ಅಡಿಯಲ್ಲಿನ ಆರೋಪಗಳ ಮೇಲೆ ನಿಗದಿ ಪ್ರಕ್ರಿಯೆ ನಡೆಯಿತು. ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಗಂಗಾಧರ ಹಡಪದ ಜೂನ್‌ 3ಕ್ಕೆ ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT