ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೂರ್ತಿ ಶರಣರ ಜಾಮೀನು ಅರ್ಜಿ ತಿರಸ್ಕೃತ

Last Updated 31 ಜನವರಿ 2023, 19:01 IST
ಅಕ್ಷರ ಗಾತ್ರ

ಚಿತ್ರದುರ್ಗ: ಲೈಂಗಿಕ ಅಪರಾಧ ಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಹಾಗೂ ಎಸ್‌ಸಿ,ಎಸ್‌ಟಿ ಮೇಲಿನ ದೌರ್ಜನ್ಯತಡೆ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ ಒಂದನ್ನು ಜಿಲ್ಲಾ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

ಸಂತ್ರಸ್ತ ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿನಿಯರ ಪೈಕಿ ಒಬ್ಬರು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯತಡೆ ಕಾಯ್ದೆ
ವ್ಯಾಪ್ತಿಯಲ್ಲಿದ್ದು, ಈ ದೋಷಾರೋಪ ಪಟ್ಟಿಯ ಮೇಲಿನ ಜಾಮೀನು ಅರ್ಜಿ ಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿದೆ.

ಮತ್ತೊಂದು ದೋಷಾರೋಪ ಪಟ್ಟಿಯ ಮೇಲಿನ ಅರ್ಜಿಯ ಆದೇಶ ವನ್ನು ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಫೆ. 6ಕ್ಕೆ ಕಾಯ್ದಿರಿಸಿದ್ದಾರೆ. ದೋಷಾರೋಪ ಪಟ್ಟಿ ಸಲ್ಲಿಕೆಗೂ ಮುನ್ನ ಜಾಮೀನು ಅರ್ಜಿಯನ್ನು ಇದೇ ನ್ಯಾಯಾಲಯ ತಿರಸ್ಕರಿಸಿತ್ತು.

ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ ದೋಷಾರೋಪಪಟ್ಟಿ ಸಲ್ಲಿಕೆಯಾಗಿತ್ತು. ಹೈಕೋರ್ಟ್‌ ನಲ್ಲಿದ್ದ ಅರ್ಜಿಯನ್ನು ಹಿಂಪಡೆದ ಶರಣರ ಪರ ವಕೀಲರು, ಮತ್ತೆ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದರು.

ದೋಷಾರೋಪ ಪಟ್ಟಿಯಿಂದ ತಮ್ಮನ್ನು ಕೈಬಿಡುವಂತೆ ಹಾಸ್ಟೆಲ್‌ ವಾರ್ಡನ್‌ ಹಾಗೂ ಮಠದ ಮಾಜಿ ವ್ಯವಸ್ಥಾಪಕ ಪರಮಶಿವಯ್ಯ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಕೋರ್ಟ್ ಫೆ. 8ಕ್ಕೆ ಕಾಯ್ದಿರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT