ಭರಮಸಾಗರ: ಗ್ರಾಮದಲ್ಲಿ ಶಿವರಾತ್ರಿ ಅಂಗವಾಗಿ ಶುಕ್ರವಾರ ಹಣ್ಣಿನ ವ್ಯಾಪಾರ ಜೋರಾಗಿ ನಡೆಯಿತು.

ವಿವಿಧ ಗ್ರಾಮಗಳಿಂದ ಜನರು ಹೋಬಳಿ ಕೇಂದ್ರಕ್ಕೆ ಬಂದು ಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಹಣ್ಣುಗಳನ್ನು ಖರೀದಿಸಿ ತೆಗೆದುಕೊಂಡು ಹೋದರು. ವರ್ತಕರು ಅಂಗಡಿಗಳ ಮುಂದೆ ಶಾಮಿಯಾನ ಹಾಕಿ ಹಣ್ಣಿನ ವ್ಯಾಪಾರ ನಡೆಸಿದರು.

ಹಳೆ ಬಸ್ನಿಲ್ದಾಣ, ವಿನಾಯಕ ಚಿತ್ರಮಂದಿರದ ಮುಂಭಾಗ, ಬಿಳಿಚೋಡು ರಸ್ತೆ, ಚನ್ನಜ್ಜಿ ವೃತ್ತ ಮೊದಲಾದ ಕಡೆ ಹಣ್ಣಿನ ವ್ಯಾಪಾರ ಜೋರಾಗಿ ನಡೆಯುತ್ತಿತ್ತು. ಕೆಲವರು ಮುಖ್ಯರಸ್ತೆಗಳ ಬದಿಯಲ್ಲಿ ತಾತ್ಕಾಲಿಕ ಅಂಗಡಿಗಳನ್ನು ತೆರೆದು ಕಲ್ಲಂಗಡಿ ಹಣ್ಣಿನ ವ್ಯಾಪಾರ ಮಾಡಿದರು. ಈ ಬಾರಿ ದ್ರಾಕ್ಷಿಹಣ್ಣು ಹೊರತುಪಡಿಸಿ ಉಳಿದ ಹಣ್ಣುಗಳ ಬೆಲೆ ಶೇ 20ರಷ್ಟು ಹೆಚ್ಚಾಗಿದೆ ಎನ್ನುತ್ತಾರೆ ವ್ಯಾಪಾರಿ ಇಸಾಮುದ್ರ ಗೊಲ್ಲರಹಟ್ಟಿಯ ಮೋಹನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.