ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಜ್ಞ ವೈದ್ಯರ ಕೊರತೆಗೆ ಕ್ರಮ: ಸರ್ಕಾರದಿಂದಲೇ ಓದಿಸಿ ಹುದ್ದೆ ಭರ್ತಿಗೆ ಚಿಂತನೆ

Last Updated 7 ಸೆಪ್ಟೆಂಬರ್ 2019, 17:12 IST
ಅಕ್ಷರ ಗಾತ್ರ

ಮೊಳಕಾಲ್ಮುರು: ‘ಸರ್ಕಾರಿ ಆಸ್ಪತ್ರೆಗಳಲ್ಲಿನ ತಜ್ಞ ವೈದ್ಯರ ಕೊರತೆಯನ್ನು ನೀಗಿಸಲು ಮುಂಬರುವ ದಿನಗಳಲ್ಲಿ ಸರ್ಕಾರದಿಂದಲೇ ಶುಲ್ಕ ಭರಿಸಿ ವೈದ್ಯರನ್ನು ಓದಿಸಿ ತಜ್ಞ ವೈದ್ಯರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ಆರೋಗ್ಯ ಇಲಾಖೆ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ತಜ್ಞ ವೈದ್ಯರ ಕೊರತೆ ಕಾಡುತ್ತಿದೆ. ದುಬಾರಿ ವೇತನ ನೀಡಿದರೂ ಬರುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಖಾಲಿ ಇರುವ ಸುಮಾರು 400 ವೈದ್ಯರ ನೇಮಕಕ್ಕೆ ಮನವಿ ಮಾಡಲಾಗಿದೆ. 950 ಸ್ಟಾಫ್ ನರ್ಸ್‌ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಡಿಮೆ ಗೌರವಧನ ನೀಡಲಾಗುತ್ತಿದೆ. ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವಂತೆ ತಿಂಗಳಿಗೆ ₹ 10 ಸಾವಿರ ನೀಡಲು ಉದ್ದೇಶಿಸಲಾಗಿದೆ. ಆಶಾ ಕಾರ್ಯಕರ್ತೆಯರಿಗೆ ಒಂದು ವರ್ಷದಿಂದ ಸಂಬಳ ನೀಡದಿರುವುದು ಗಮನಕ್ಕೆ ಬಂದಿದೆ. ಪ್ರತಿ ತಿಂಗಳೂ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT