ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಬಂಧನವಾಗಲಿ: ಛಲವಾದಿ ನಾರಾಯಣಸ್ವಾಮಿ

Published : 18 ಆಗಸ್ಟ್ 2024, 14:00 IST
Last Updated : 18 ಆಗಸ್ಟ್ 2024, 14:00 IST
ಫಾಲೋ ಮಾಡಿ
Comments

ಚಿತ್ರದುರ್ಗ: ‘ಮುಡಾ ಹಗರಣದ ಪ್ರಮುಖ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸಬೇಕು’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

‘ಸಿದ್ದರಾಮಯ್ಯ ಜೈಲಿಗೆ ಹೋದರೆ ಅವರ ಒಂದೊಂದೇ ಭ್ರಷ್ಟಾಚಾರದ ಪ್ರಕರಣಗಳು ಬಯಲಿಗೆ ಬರುತ್ತವೆ. ಅವರು ಮಾತುಮಾತಿಗೂ ತಮ್ಮ‌ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ ಎನ್ನುತ್ತಿದ್ದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಅವರು ಕರಿ ಕಾಗೆ ಆಗಿದ್ದಾರೆ. ಕಪ್ಪಾಗಿರುವ ಅವರಲ್ಲಿ ಕಪ್ಪು ಚುಕ್ಕೆ ತೋರಿಸುವುದು ಹೇಗೆ’ ಎಂದು ಇಲ್ಲಿ ಭಾನುವಾರ ಸುದ್ದಿಗಾರರಿಗೆ ಪ್ರಶ್ನಿಸಿದರು.

‘ಬಿ.ಎಸ್.ಯಡಿಯೂರಪ್ಪ ಪ್ರಕರಣದ ಬಗ್ಗೆ ಹಿಂದೆ ಮಾತನಾಡಿದ್ದ ಅವರು ರಾಜ್ಯಪಾಲರು ಕಾನೂನು ಪಾಲನೆ‌ ಮಾಡಿದ್ದಾಗಿ ಹೇಳಿದ್ದರು. ‌ಈಗ ರಾಜ್ಯಪಾಲರು ಕಾನೂನು ಉಲ್ಲಂಘಿಸಿದ್ದಾರೆಯೇ ? ಗೃಹಸಚಿವ ಪರಮೇಶ್ವರ ಸೇರಿ ಕಾಂಗ್ರೆಸ್ ಮುಖಂಡರು ಎರಡು ನಾಲಗೆ ಕತೆ ಹೇಳುವುದನ್ನು ನಿಲ್ಲಿಸಲಿ’ ಎಂದರು.

‘ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್‌ ನಿರಾಣಿ, ಶಶಿಕಲಾ ಜೊಲ್ಲೆ‌ ಅವರ ಪ್ರಕರಣಗಳು ತನಿಖೆಗೆ ಯೋಗ್ಯವಾಗಿರಲಿಲ್ಲ. ಹೀಗಾಗಿ ಅವುಗಳನ್ನು ಪ್ರಾಸಿಕ್ಯೂಷನ್‌ಗೆ ಕೊಟ್ಟಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಎಲ್ಲೂ ಟೇಪ್‌ ಕತ್ತರಿಸುವ ಕೆಲಸ ಮಾಡಿಲ್ಲ. ಇಂತಹ ಸರ್ಕಾರ ಬೇಕಾ? ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT