ಚಿತ್ರದುರ್ಗ: ‘ನೊಳಂಬ ಲಿಂಗಾಯತ ಸಮುದಾಯದ ಆರಾಧ್ಯ ದೈವ ಗುರು ಸಿದ್ದರಾಮೇಶ್ವರರ 853ನೇ ಜಯಂತಿ ಮಹೋತ್ಸವ ಹೊಳಲ್ಕೆರೆಯ ವಾಲ್ಮೀಕಿ ಮೈದಾನದಲ್ಲಿ ಜ. 14 ಮತ್ತು 15ರಂದು ನಡೆಯಲಿದೆ. ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವರು’ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

‘ಜ. 14ರಂದು ಕುಪ್ಪೂರು ತಮ್ಮಡಿಹಳ್ಳಿ ವಿರಕ್ತಮಠದ ಅಭಿನವ ಮಲ್ಲಿಕಾರ್ಜುನ ದೇಶೀಕೇಂದ್ರ ಸ್ವಾಮೀಜಿ ಷಟಸ್ಥಲ ಧ್ವಜಾರೋಹಣ ನೆರವೇರಿಸುವರು. ನೊಳಂಬ ಲಿಂಗಾಯತ ಸಂಘದ ಅಧ್ಯಕ್ಷ ಬಿ.ಕೆ.ಚಂದ್ರಶೇಖರ್ ಅವರು ನಂದಿ ಧ್ವಜಾರೋಹಣ ನೆರವೇರಿಸುವರು. ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಕೆರೆಕೋಡಿ ರಂಗಾಪುರ ಕ್ಷೇತ್ರದ ಗುರುಪುರ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಹೋತ್ಸವ ಉದ್ಘಾಟಿಸುವರು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಚಿವ ಈಶ್ವರ ಖಂಡ್ರೆ ನೊಳಂಬ ಇತಿಹಾಸ ಹಾಗೂ ಸಂಘದ ಸಾಕ್ಷ್ಯಚಿತ್ರ, ಮಾಜಿ ಸಂಸದ ಬಸವರಾಜ್ ನೊಳಂಬ ಸಂಚಿಕೆ ಬಿಡುಗಡೆ ಮಾಡುವರು. ಅಂದು ಮಧ್ಯಾಹ್ನ ಸಾಹಿತ್ಯ ಗೋಷ್ಠಿ ನಡೆಯಲಿದ್ದು, ಯಾದವ ಗುರುಪೀಠದ ಯಾದವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಸದ ಗೋವಿಂದ ಕಾರಜೋಳ, ಮುಖಂಡ ಜೆ.ಸಿ.ಮಾಧುಸ್ವಾಮಿ ಭಾಗವಹಿಸುವರು’ ಎಂದರು.

‘ಸಾಹಿತಿ ಕತ್ತಿಗೆ ಚನ್ನಪ್ಪ ಅವರಿಗೆ ಸಂಸದ ಕೋಟ ಶ್ರೀನಿವಾಸ್ಪೂಜಾರಿ ಅವರು ‘ಸಿದ್ದರಾಮ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮಾಡಲಿದ್ದಾರೆ. ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಂಕರ ಮಹದೇವ ಬಿದರಿ ಭಾಗವಹಿಸುವರು. ಜ. 15ರಂದು ಬೆಳಿಗ್ಗೆ ಬಸವಜ್ಞಾನ ಮಂದಿರದ ಮಾತೆ ಬಸವಾಂಜಲಿ ಅವರ ನೇತೃತ್ವದಲ್ಲಿ ಇಷ್ಟಲಿಂಗ ಪೂಜಾ ವಿಧಾನ ಹಾಗೂ ಲಿಂಗಧಾರಣ ಕಾರ್ಯಕ್ರಮ ನಡೆಯಲಿದೆ. ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭಾಗವಹಿಸುವರು. ಮಹಿಳಾ ಮತ್ತು ಕೃಷಿ ಗೋಷ್ಠಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು’ ಎಂದು ತಿಳಿಸಿದರು.

‘ಶಾಸಕ ಜ್ಯೋತಿಗಣೇಶ್ ಅವರು ಅಧ್ಯಕ್ಷತೆ ವಹಿಸುವರು. ಸಚಿವ ಎಂ.ಬಿ.ಪಾಟೀಲ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಂಸದರಾದ ಬಿ.ವೈ.ರಾಘವೇಂದ್ರ, ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸುವರು. ಮಧ್ಯಾಹ್ನ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮುರುಘಾ ಮಠದ ಬಸವಕುಮಾರ ಸ್ವಾ ಮೀಜಿ, ಕೆಲ್ಲೋಡು ಕಾಗಿನೆಲೆ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಭಾಗವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡುವರು. ಮಾಜಿ ಸಚಿವ ಆಂಜನೇಯ ಸಿದ್ದರಾಮರ ವಚನಗಳ ಮುದ್ರಿಕೆ ಬಿಡುಗಡೆ ಮಾಡುವರು’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಸಿ.ಶಶಿಧರ್, ಮುಖಂಡರಾದ ಚಂದ್ರಶೇಖರ್, ಕುಬೇರಪ್ಪ, ರಮೇಶಪ್ಪ, ಯೋಗರಾಜ್, ಮಲ್ಲಿಕಾರ್ಜುನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.