7

ವಿದ್ಯಾರ್ಥಿಗಳಿಂದ ಮೌನ ಪ್ರತಿಭಟನೆ

Published:
Updated:

ಭರಮಸಾಗರ: ಸರ್ಕಾರಿ ಪ್ರೌಢಶಾಲೆ ಸ್ಥಳಾಂತರ ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ನಡೆಸುತ್ತಿರುವ ಪ್ರತಿಭಟನೆ 9ನೇ ದಿನವೂ ಮುಂದುವರಿಯಿತು.

‘ಪ್ರೌಢಶಾಲೆ ಆಲಘಟಕ್ಕೆ ಸ್ಥಳಾಂತರಗೊಂಡಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಡಿಡಿಪಿಐ, ಬಿಇಒ ಅವರು ಶಾಲೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ಶಾಲೆ ಇಂದು ಆರಂಭವಾಗುತ್ತದೆ, ನಾಳೆ ಆರಂಭವಾಗುತ್ತದೆ ಎಂದು ಆಸೆಯಿಂದ ಮಕ್ಕಳು ಪ್ರತಿ ದಿವಸ ಸಮವಸ್ತ್ರ ಧರಿಸಿ ಹೆಗಲಿಗೆ ಬ್ಯಾಗ್ ಹಾಕಿ ಬರುತ್ತಿದ್ದು, ಅವರಿಗೆ ನಿರಾಸೆಯಾಗಿದೆ. ಮಕ್ಕಳ ಹೋರಾಟಕ್ಕೆ ಬೆಲೆಯೇ ಇಲ್ಲದಂತಾಗಿದೆ’ ಎಂದು ಪೋಷಕರು ಆರೋಪಿಸಿದರು.

ಮಂಗಳವಾರ ಭರಮಸಾಗರದಲ್ಲಿ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲು ವಿದ್ಯಾರ್ಥಿಗಳು ನಿರ್ಧರಿಸಿದ್ದರು. ಆದರೆ ಸಂತೆ ದಿನವಾಗಿದ್ದರಿಂದ ಖರೀದಿಗೆ ತೊಂದರೆಯಾಗುತ್ತದೆ ಎಂದು ಬಂದ್ ಕೈಬಿಟ್ಟು ಮೌನ ಪ್ರತಿಭಟನೆ ನಡೆಸಿದರು.

ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಮಕ್ಕಳು ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !