ಸಿರಿಗೆರೆ: ಇಲ್ಲಿನ ಶಿವಕುಮಾರ ಸ್ವಾಮೀಜಿ ವಿದ್ಯಾರ್ಥಿ ನಿಲಯದ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತರಳಬಾಳು ಮಠದ ಸಂಪರ್ಕ ದಲ್ಲಿದ್ದ ರವಿಚಂದ್ರ ವಿರುದ್ಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಾಗಿದೆ.

ವಿದ್ಯಾರ್ಥಿಗಳನ್ನು ರವಿಚಂದ್ರ ಹಿಡಿದು ಥಳಿಸುವ, ತಲೆ ಹಿಡಿದು ಗೋಡೆಗೆ ಗುದ್ದುವ, ಕಾಲಿನಿಂದ ತುಳಿ ಯುವ ದೃಶ್ಯಗಳಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಸ್ಥಳೀಯರು ಮಕ್ಕಳ ಕಲ್ಯಾಣ ಸಮಿತಿಗೆ ಈ ವಿಡಿಯೊ ಕಳುಹಿಸಿದ್ದರು. ಬಳಿಕ ಸಮಿತಿಯವರು, ಪೊಲೀಸರೊಂದಿಗೆ ಹಾಸ್ಟೆಲ್ಗೆ ಭೇಟಿ ನೀಡಿ ಮಹಜರು ನಡೆಸಿದ್ದರು. ನಂತರ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಎಫ್ಐಆರ್ ಹಾಕಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-42831361

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.