ಸಿರಿಗೆರೆ: ‘ಹೆಣ್ಣುಮಕ್ಕಳು ಆಸ್ತಿಯಲ್ಲಿನ ಹಕ್ಕು ಕೇಳಬಾರದು’ ಎಂದು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕಿವಿಮಾತು ಹೇಳಿದರು.

ಸಿರಿಗೆರೆಯ ಸದ್ಧರ್ಮ ನ್ಯಾಯಪೀಠದ ಸಭಾಂಗಣದಲ್ಲಿ ಭದ್ರಾವತಿಯ ತರಳಬಾಳು ಹುಣ್ಣಿಮೆ ಮಹೋತ್ಸವದ ಯಶಸ್ಸಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದಿಸಲು ಭಾನುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

‘ಆಸ್ತಿ ಮೇಲೆ ಹಕ್ಕು ಸಾಧಿಸುವ ಸಲುವಾಗಿ ಹೆಣ್ಣುಮಕ್ಕಳು ನ್ಯಾಯಾಲಯದ ಮೆಟ್ಟಿಲೇರುವ ಮನೋಭಾವ ನಿಲ್ಲಬೇಕು. ಕಾನೂನುಗಳನ್ನು ದುರ್ಬಳಕೆ ಮಾಡಿಕೊಳ್ಳಬಾರದು. ತವರು ಮನೆಯ ಗೌರವ ಉಳಿಸುವುದೇ ನಿಜವಾದ ಧರ್ಮ. ಎಲ್ಲರೂ ಕೌಟುಂಬಿಕ ಮೌಲ್ಯಗಳನ್ನು ಅರಿತು ಬದುಕು ಸಾಗಿಸಬೇಕು’ ಎಂದರು.

‘ರೈತರ ಹಿತಕ್ಕೆಂದು ಜಾರಿಗೊಳಿಸಿರುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಹಲವು ದೋಷಗಳಿಗೆ. 7 ವರ್ಷದ ಸರಾಸರಿ ಬೆಳೆಯನ್ನು ಲೆಕ್ಕಕ್ಕೆ ತೆಗೆದುಕೊಂಡು ಬರ ಪರಿಹಾರ ನೀಡುವ ಪದ್ಧತಿ ಸರಿಯಲ್ಲ. ಆಯಾ ವರ್ಷದ ನಷ್ಟಗಳನ್ನೇ ಗಣನೆಗೆ ತೆಗೆದುಕೊಂಡು ಪರಿಹಾರ ನೀಡಬೇಕು. ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿ ಕುಂಟುತ್ತಾ ಸಾಗಿದೆ. ಇದರ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚಿಸಲು ದೆಹಲಿಗೆ ತೆರಳುವ ಉದ್ದೇಶ ಇದೆ’ ಎಂದು ತಿಳಿಸಿದರು.

‘ದಾವಣಗೆರೆ – ಬೆಂಗಳೂರು ನೇರ ರೈಲು ಮಾರ್ಗ ನಿರ್ಮಿಸುವ ವೇಳೆ ಸಿರಿಗೆರೆ ಸರ್ಕಲ್ನಲ್ಲಿ ನಿಲ್ದಾಣ ನಿರ್ಮಾಣ ಆಗಬೇಕೆನ್ನುವುದು ನಮ್ಮ ಅಪೇಕ್ಷೆ. ಈ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜೊತೆ ಮಾತನಾಡುತ್ತೇವೆ. ಜೊತೆಗೆ ಭದ್ರಾವತಿಯ ಉಕ್ಕು ಕಾರ್ಖಾನೆಯನ್ನು ಪುನರಾರಂಭಿಸುವ ಅಗತ್ಯವಿದೆ’ ಎಂದರು.

‘ತರಳಬಾಳು ಹುಣ್ಣಿಮೆ ಯಶಸ್ವಿಯಾಗಲು ಮಠದ ಭಕ್ತರು, ಕಾರ್ಯಕರ್ತರು ಸಂಸ್ಥೆಯ ನೌಕರರು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಅವರ ಸೇವೆ ಸ್ತುತ್ಯಾರ್ಹ’ ಎಂದು ತಿಳಿಸಿದರು.

ಆಡಳಿತಾಧಿಕಾರಿ ಎಚ್.ವಿ. ವಾಮದೇವಪ್ಪ ಹಾಗೂ ಕಾರ್ಯನಿರ್ವಹಣಾಧಿಕಾರಿ ವೀರಣ್ಣ ಎಸ್. ಜತ್ತಿ ಮಾತನಾಡಿದರು.

ಭದ್ರಾವತಿ ತರಳಬಾಳು ಹುಣ್ಣಿಮೆಯ ಯಶಸ್ಸಿಗೆ ಶ್ರಮಿಸಿದ ಶ್ರೀಮಠದ ಎಲ್ಲಾ ನೌಕರರಿಗೆ ನೆನಪಿನ ಕಾಣಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್. ಮರುಳಸಿದ್ದಯ್ಯ, ಕಚೇರಿಯ ಮುರುಗೇಂದ್ರಯ್ಯ, ಸಂಸ್ಥೆಯ ಶಾಲಾ- ಕಾಲೇಜುಗಳ ಸಿಬ್ಬಂದಿ, ತರಳಬಾಳು ಹುಣ್ಣಿಮೆ ಸಮಿತಿ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260317-44-748218100

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.