ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆದಿಕವಿ’ ಪುರಸ್ಕಾರಕ್ಕೆ ಸಿರಿಗೆರೆ ಶ್ರೀ ಆಯ್ಕೆ

Last Updated 2 ನವೆಂಬರ್ 2020, 3:03 IST
ಅಕ್ಷರ ಗಾತ್ರ

ಸಿರಿಗೆರೆ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ವಾರ್ಷಿಕ ‘ಆದಿಕವಿ’ ಪ್ರಶಸ್ತಿಗೆ ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ರಾಜ್ಯ ಅಧ್ಯಕ್ಷ ಪ್ರೇಮಶೇಖರ್ ತಿಳಿಸಿದ್ದಾರೆ.

ಡಿಸೆಂಬರ್‌ನಲ್ಲಿ ಕಾರ್ಯಕ್ರಮ ಆಯೋಜಿಸಿ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಾಮೀಜಿ ಶಿಕ್ಷಣ, ಸಮಾಜಸೇವೆ, ಕೃಷಿ, ಸಾಹಿತ್ಯ ಹೀಗೆ ಎಲ್ಲ ರಂಗಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಜನಮನ್ನಣೆ ಪಡೆದಿದ್ದಾರೆ. ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ಸಂಸ್ಕೃತದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

9ನೇ ಅಂತರರಾಷ್ಟ್ರೀಯ ಸಂಸ್ಕೃತೋತ್ಸವದ ಗೌರವಾಧ್ಯಕ್ಷರಾಗಿದ್ದರು. ‘ಕೂಡಲಸಂಗಮದ ಅಳಿವು–ಉಳಿವು’, ‘ಬಿಸಿಲು ಬೆಳದಿಂಗಳು’, ‘ಯಮುನಾ ತೀರದಲ್ಲಿ’, ‘ಕಡಲಾಚೆಯಿಂದ’, ‘ಎತ್ತಣ ಮಾಮರ ಎತ್ತಣ ಕೋಗಿಲೆ’ ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ.

‘ಗಣಕ ಅಷ್ಟಾಧ್ಯಾಯಿನಿ’ ಎಂಬ ತಂತ್ರಜ್ಞಾನ ಬಳಸಿಕೊಂಡು ಸಂಸ್ಕೃತ, ಕನ್ನಡ, ಇಂಗ್ಲಿಷ್ ಭಾಷೆಗಳಲ್ಲಿ ವಚನಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಸಂಸ್ಕೃತ, ಕನ್ನಡ, ಇಂಗ್ಲಿಷ್, ಪರ್ಷಿಯನ್ ಹಲವು ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT