ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಎಎಸ್‌ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಬಂಧನ

Last Updated 29 ಅಕ್ಟೋಬರ್ 2022, 10:03 IST
ಅಕ್ಷರ ಗಾತ್ರ

ಚಿತ್ರದುರ್ಗ: ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಎಸ್ ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾರೆ.

ಆರೋಪಿಯನ್ನು ಶನಿವಾರ ಬಂಧಿಸಿದ ತನಿಖಾ ತಂಡ ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿತು. ಬಳಿಕ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿತು.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆ.28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಿಂದ ಆರೋಪಿ ತಲೆಮರೆಸಿಕೊಂಡು ಎರಡು ತಿಂಗಳು ಕಳೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT