ಭಾನುವಾರ, ಸೆಪ್ಟೆಂಬರ್ 20, 2020
22 °C

Video | ಚಿತ್ರದುರ್ಗದಲ್ಲಿ  ಮಾನವ ರಹಿತ ಲಘು ವಿಮಾನ ಪತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ರಕ್ಷಣಾ ಸಂಶೋಧನಾ ಹಾಗೂ ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮಾನವ ರಹಿತ ಲಘು ವಿಮಾನ ತಾಲ್ಲೂಕಿನ ಜೋಡಿ ಚಿಕ್ಕೇನಹಳ್ಳಿ ಸಮೀಪ ಪತಗೊಂಡಿದೆ.

‘ತಪಾಸ್‌– 4 ಎಡಿಇ 19’ ಹೆಸರಿನ ವಿಮಾನವನ್ನು ಚಳ್ಳಕೆರೆ ತಾಲ್ಲೂಕಿನ ಕುದಾಪುರದ ಡಿಆರ್‌ಡಿಒ ಕೇಂದ್ರದಲ್ಲಿ ಮಂಗಳವಾರ ನಸುಕಿನಲ್ಲಿ ಬಾನಂಗಳಕ್ಕೆ ಹಾರಿಸಿತ್ತು. ಹಾಸನದ ವಾಯು ನೆಲೆಯವರೆಗೂ ಹೋಗಿ ಅದು ಚಳ್ಳಕೆರೆಗೆ ಮರಳಬೇಕಿತ್ತು. ಆದರೆ, ಬೆಳಿಗ್ಗೆ 6.30ರ ಸುಮಾರಿಗೆ ಇದು ರಡಾರ್‌ ಸಂಪರ್ಕ ಕಳೆದುಕೊಂಡಿತ್ತು. 15 ನಿಮಿಷದ ಬಳಿಕ ಅದು ನೆಲಕ್ಕೆ ಅಪ್ಪಳಿಸಿದೆ ಎಂದು ಡಿಆರ್‌ಡಿಒ ಮೂಲಗಳು ಮಾಹಿತಿ ನೀಡಿವೆ.

‘ತಪಾಸ್‌– 4 ಎಡಿಇ 19’ ಲಘು ವಿಮಾನವನ್ನು ಮಂಗಳವಾರ ಮೊದಲ ಬಾರಿಗೆ ಪ್ರಯೋಗಾರ್ಥ ಹಾರಾಟ ನಡೆಸಲಾಗಿತ್ತು. ರಡಾರಿನಿಂದ ಸಂಪರ್ಕ ಕಡೆದುಕೊಂಡ ತಕ್ಷಣ ಡಿಆರ್‌ಡಿಒ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಜೋಡಿ ಚುಕ್ಕೇನಹಳ್ಳಿಯ ರೈತ ಆನಂದಪ್ಪ ಎಂಬುವರ ಅಡಿಕೆ ತೋಟದಲ್ಲಿ ವಿಮಾನ ಉರುಳಿದ ಸಂಗತಿಯನ್ನು ಗ್ರಾಮಸ್ಥರು ಪೊಲೀಸರಿಗೆ ನೀಡಿದ್ದಾರೆ. ಘಟನೆಯಲ್ಲಿ ವಿಮಾನ ಸಂಪೂರ್ಣ ಛಿದ್ರಗೊಂಡಿದೆ.

ಎಸ್‌ಪಿ ಡಾ.ಕೆ.ಅರುಣ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಡಿಆರ್‌ಡಿಯೊ ಸಿಬ್ಬಂದಿ ಕೂಡ ಸ್ಥಳಕ್ಕೆ ಧಾವಿಸಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು