ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಪುರ | ಹಾವು ಕಚ್ಚಿ ಬಾಲಕ ಸಾವು; ಆಸ್ಪತ್ರೆ ಮುಂದೆ ಪ್ರತಿಭಟನೆ

Published 24 ಜನವರಿ 2024, 13:58 IST
Last Updated 24 ಜನವರಿ 2024, 13:58 IST
ಅಕ್ಷರ ಗಾತ್ರ

ಧರ್ಮಪುರ: ಹಾವು ಕಚ್ಚಿದ ಬಾಲಕನಿಗೆ ತಜ್ಞ ವೈದ್ಯರಿಲ್ಲದ ಕಾರಣ ಸೂಕ್ತ ಚಿಕಿತ್ಸೆ ದೊರೆಯಲಿಲ್ಲ ಎಂದು ಆರೋಪಿಸಿ ಸಮೀಪದ ಬೆನಕನಹಳ್ಳಿ ಗ್ರಾಮಸ್ಥರು ಬುಧವಾರ ಆಸ್ಪತ್ರೆ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದರು.

ಮೃತ ಬಾಲಕ ಶಶಾಂಕ (11) ತಂದೆಯ ಜೊತೆ ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ಬುಧವಾರ ಬೆಳಗಿನ ಜಾವ 3 ಗಂಟೆಗೆ ಹಾವು ಕಚ್ಚಿದೆ. ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದು, ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹಿರಿಯೂರಿಗೆ ಹೋಗಲು ಸೂಚಿಸಿದ್ದಾರೆ. ನಂತರ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ನಂತರ ಚಿತ್ರದುರ್ಗಕ್ಕೆ ಹೋಗುವಾಗ ದಾರಿ ಮಧ್ಯದಲ್ಲಿ ಬಾಲಕ ಮೃತಪಟ್ಟಿದ್ದಾನೆ.

ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರ ಕೊರತೆಯಿಂದಾಗಿ ಶಶಾಂಕ ಸಾವನ್ನಪ್ಪಲು ಕಾರಣವಾಗಿದೆ. ಅಧಿಕಾರಿಗಳು ನಮಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಮೃತ ಬಾಲಕನ ತಂದೆ ಬಸವರಾಜು ಒತ್ತಾಯಿಸಿದ್ದಾರೆ.

ಶಶಾಂಕ ಬಾಲಕನಾಗಿದ್ದರಿಂದ ತಜ್ಞ ವೈದ್ಯರು ಇಲ್ಲದೆ ಇದ್ದುದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದೊಯ್ಯಲು ಸಲಹೆ ನೀಡಲಾಗಿತ್ತು ಎಂದು ವೈದ್ಯ ಸಿ.ಹನುಮಂತರಾಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT