ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಸಾಮಾಜಿಕ ನ್ಯಾಯ

ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ
Last Updated 28 ಮಾರ್ಚ್ 2023, 6:12 IST
ಅಕ್ಷರ ಗಾತ್ರ

ಹೊಳಲ್ಕೆರೆ: ‘ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಮಾಜಿಕ ನ್ಯಾಯ ಸಿಗಲು ಸಾಧ್ಯ. ಎಲ್ಲರೂ ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ಮಾಜಿ ಸಚಿವ ಎಚ್.ಆಂಜನೇಯ ಮನವಿ ಮಾಡಿದರು.

ತಾಲ್ಲೂಕಿನ ತೇಕಲವಟ್ಟಿಯಲ್ಲಿ ಸೋಮವಾರ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಅವರು ಮಾತನಾಡಿದರು.

ಬಿಜೆಪಿಯವರ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೆ ಏರಿದ್ದು, ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಬೆಲೆಗಳು ಗಗನಕ್ಕೆ ಏರಿರುವುದರಿಂದ ಮಧ್ಯಮ ವರ್ಗದ ಜನಜೀವನ ನಡೆಸುವುದೇ ಕಷ್ಟವಾಗಿದೆ. ಆದ್ದರಿಂದ ಈ ಬಾರಿ ಜನ ಕಾಂಗ್ರೆಸ್ ಪಕ್ಷ ಬೆಂಬಲಿಸಲು ಮುಂದಾಗಿದ್ದಾರೆ ಎಂದರು.

ಹೊರಕೆರೆ ದೇವರಪುರ, ಉಪ್ಪರಿಗೇನ ಹಳ್ಳಿ, ಚಿತ್ರಹಳ್ಳಿ, ಟಿ.ನುಲೇನೂರು ಗ್ರಾಮಗಳಲ್ಲಿ ಪ್ರಚಾರ ಕಾರ್ಯಕ್ರಮ ನಡೆಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಇಂದಿರಾ ಕಿರಣ್ ಕುಮಾರ್, ಮಾಜಿ ಸದಸ್ಯ ಡಿ.ಕೆ.ಶಿವಮೂರ್ತಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್, ಎಚ್.ಡಿ.ರಂಗಯ್ಯ, ಬಾಣಗೆರೆ ಮಂಜುನಾಥ್, ಉಪ್ಪರಿಗೆನಹಳ್ಳಿ ರಾಜಪ್ಪ, ಗ್ರಾಮ ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT