ಚಿತ್ರದುರ್ಗ: ‘ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸುವುದು ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ. ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ನೀಡಿದ್ದ ಮಾತಿನಂತೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಬುದ್ಧನಗರದಲ್ಲಿ ಸೋಮವಾರ ಅಧಿಕಾರಿಗಳು ಹಾಗೂ ಗಣತಿದಾರರೊಂದಿಗೆ ಮನೆಮನೆಗೆ ಭೇಟಿ ನೀಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

‘ರಾಜ್ಯದಾದ್ಯಂತ ಸಮೀಕ್ಷಾ ಕಾರ್ಯ ಪ್ರಾರಂಭವಾಗಿದೆ. ನಾವು ರಾಜ್ಯದಲ್ಲಿ ಜಾತಿ ಗಣತಿ ಮಾಡುತ್ತಿಲ್ಲ, ಈ ಬಗ್ಗೆ ತಪ್ಪು ತಿಳಿದುಕೊಳ್ಳಬಾರದು. ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ಅಂಕಿ-ಅಂಶಗಳ ಮೂಲಕ ಸಂಗ್ರಹಿಸಲಾಗುತ್ತಿದೆ. ಆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂಬುದೇ ಸಮೀಕ್ಷೆಯ ಉದ್ದೇಶವಾಗಿದೆ’ ಎಂದರು.

‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 4,62,280 ಮನೆಗಳನ್ನು ಗುರುತಿಸಲಾಗಿದ್ದು, ಒಟ್ಟು 3,768 ಗಣತಿದಾರರು, 376 ಮೇಲ್ವಿಚಾರಕರು, 92 ಮಾಸ್ಟರ್ ಟ್ರೇನರ್ಗಳನ್ನು ನೇಮಕ ಮಾಡಲಾಗಿದೆ. ಸಮೀಕ್ಷೆಯಲ್ಲಿ ಒಟ್ಟು 60 ಪ್ರಶ್ನಾವಳಿಗಳು ಕೇಳಿದ್ದು, ಮುಖ್ಯವಾಗಿ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಆಧಾರದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದರು.

‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸಮೀಕ್ಷೆಯ ಬಗ್ಗೆ ಅರಿವು ಮೂಡಿಸಲು ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಎನ್ಆರ್ಎಲ್ಎಂ ಮೂಲಕ ಮನೆಗಳಿಗೆ ಭೇಟಿ ನೀಡಿ ಕುಟುಂಬ ಅನುಸೂಚಿ ನಮೂನೆಗಳನ್ನು ನೀಡಿ ಜಾಗೃತಿ ಮೂಡಿಸಲಾಗಿದೆ. ಒಟ್ಟು 4,31,000 ಕುಟುಂಬ ಅನುಸೂಚಿಗಳನ್ನು ಚಿತ್ರದುರ್ಗ ಜಿಲ್ಲೆಗೆ ನೀಡಲಾಗಿದ್ದು, ಮನೆಗಳಿಗೆ ನಮೂನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ’ ಎಂದರು.

‘ಗಣತಿದಾರರಿಗೆ ಒಟ್ಟು 3,491 ಕೈಪಿಡಿಗಳನ್ನು ವಿತರಣೆ ಮಾಡಲಾಗಿದೆ. ಗಣತಿದಾರರಿಗೆ ಅವಶ್ಯವಾಗಿ ಬೇಕಾಗಿರುವ ಗುರುತಿನ ಚೀಟಿಗಳನ್ನು ಮತ್ತು ಟೋಪಿಗಳನ್ನು ವಿತರಣೆ ಮಾಡಲಾಗಿದೆ. ಕುಟುಂಬದ ಸದಸ್ಯರು, ಮುಖ್ಯಸ್ಥರಿಂದ ಸಮೀಕ್ಷೆಗೆ ಮಾಹಿತಿ ಪಡೆದ ನಂತರ ಪಡೆಯಬೇಕಾದ ಸ್ವಯಂ ದೃಢೀಕರಣ ಪತ್ರಗಳನ್ನು ಗಣತಿದಾರರಿಗೆ ಜಿಲ್ಲಾಡಳಿತದಿಂದ ವಿತರಣೆ ಮಾಡಲಾಗಿರುತ್ತದೆ. ಸಮೀಕ್ಷಾ ಕಾರ್ಯವು ಸೆ.22ರಿಂದ ಅ.7ರವರೆಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯಲಿದೆ’ ಎಂದರು.

‘ಸಮೀಕ್ಷಾ ಕಾರ್ಯಕ್ಕೆ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ಸಾರ್ವಜನಿಕರು, ಗಣತಿದಾರರು ಯಾವುದೇ ಪ್ರಶ್ನಾವಳಿಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಚಿತ್ರದುರ್ಗ ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ-08194-235034, ಚಳ್ಳಕೆರೆ 08195-200130, 9972997738, ಹಿರಿಯೂರು 6362474421, ಹೊಳಲ್ಕೆರೆ 08191-200021, ಹೊಸದುರ್ಗ 9972385061, ಮೊಳಕಾಲ್ಮುರು 9743085676 ಹಾಗೂ ರಾಜ್ಯಮಟ್ಟದ ಸಹಾಯವಾಣಿ ಸಂಖ್ಯೆ 8050770004ಗೆ ಸಂಪರ್ಕಿಸಬಹುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ತಹಶೀಲ್ದಾರ್ ಗೋವಿಂದರಾಜು, ನಗರಸಭೆ ಸದಸ್ಯೆ ಶ್ರೀದೇವಿ ಚಕ್ರವರ್ತಿ, ಪೌರಾಯುಕ್ತೆ ಎಸ್.ಲಕ್ಷ್ಮಿ ಇದ್ದರು.

ಸಮರ್ಪಕ ಮಾಹಿತಿ ಕೊಡಿಹೊಳಲ್ಕೆರೆ: ‘ಸರ್ಕಾರ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಿಂದ ಬಡ ಮಧ್ಯಮ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡಲು ಅನುಕೂಲ ಆಗಲಿದೆ’ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು. ತಾಲ್ಲೂಕಿನ ಹಳೇಹಳ್ಳಿ ಗೊಲ್ಲರಹಟ್ಟಿಯಲ್ಲಿ ಸೋಮವಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಗಣತಿದಾರರು ಮನೆಗೆ ಬಂದಾಗ ನಿಖರ ಮಾಹಿತಿ ನೀಡಬೇಕು. ಜಾತಿ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸ್ಥಿತಿಗತಿಗಳ ಮಾಹಿತಿ ಕೊಡಬೇಕು. ಇದರಿಂದ ಸರ್ಕಾರ ಎಲ್ಲಾ ವರ್ಗದ ಜನರ ಸ್ಥಿತಿಗತಿ ಗುರುತಿಸಿ ಪ್ರೋತ್ಸಾಹದಾಯಕ ಯೋಜನೆಗಳನ್ನು ರೂಪಿಸಲು ಅನುಕೂಲ ಆಗಲಿದೆ ಎಂದರು. ತಹಶೀಲ್ದಾರ್ ವಿಜಯಕುಮಾರ್ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶ್ರೀನಿವಾಸ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಯುವರಾಜ್ ಉಪಾಧ್ಯಕ್ಷೆ ಸರೋಜಮ್ಮ ಲೋಕೇಶ್ ದಾಸಯ್ಯನಹಟ್ಟಿ ರಮೇಶ್ ಇದ್ದರು.

ಸಮಾನತೆಗಾಗಿ ಸಮೀಕ್ಷೆ ಹಿರಿಯೂರು: ‘ಸಾಮಾಜಿಕ ಸಮಾನತೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಾರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರತಿಯೊಬ್ಬರೂ ಸ್ಪಷ್ಟವಾದ ಮಾಹಿತಿ ಒದಗಿಸಿ ಸಹಕಾರ ನೀಡುವ ಮೂಲಕ ಯಶಸ್ವಿಗೊಳಿಸಬೇಕು’ ಎಂದು ನಗರಸಭೆ ಅಧ್ಯಕ್ಷ ಬಾಲಕೃಷ್ಣ ಮನವಿ ಮಾಡಿದರು. ನಗರದ ವೇದಾವತಿ ಬಡಾವಣೆಯ ಬೇವಿನ ಮರದ ರಸ್ತೆಯಲ್ಲಿ ಸೋಮವಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಹಶೀಲ್ದಾರ್ ಎಂ.ಸಿದ್ದೇಶ್ ಮಾತನಾಡಿ ‘ನಗರದ ಎಲ್ಲಾ ನಿವಾಸಿಗಳು ಗಣತಿದಾರರು ಮನೆಗೆ ಬಂದಾಗ ಪೂರಕ ದಾಖಲೆಗಳಾದ ಪಡಿತರ ಚೀಟಿ ಆಧಾರ್ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತೋರಿಸುವ ಮೂಲಕ ಖಚಿತ ಮಾಹಿತಿ ನೀಡಬೇಕು’ ಎಂದರು.

ಬಡಾವಣೆಯಲ್ಲಿರುವ ಶಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅವರ ನಿವಾಸದಲ್ಲಿ ಮಾಹಿತಿ ಪಡೆಯುವ ಮೂಲಕ ಸಮೀಕ್ಷೆಗೆ ಅಧಿಕೃತ ಚಾಲನೆ ನೀಡಲಾಯಿತು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ.ಡಿ.ಸಣ್ಣಪ್ಪ ಪೌರಾಯುಕ್ತ ಎ.ವಾಸಿಂ ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿನೇಶ್ ಸಿಡಿಪಿಒ ರಾಘವೇಂದ್ರ ಇಸಿಒ ಶಿವಾನಂದ್ ಪುಟ್ಟಸ್ವಾಮಿ ಮುಖಂಡ ಡೈರಿ ತಿಪ್ಪೇಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.