ಚಿತ್ರದುರ್ಗ: ಕೆರೆಯಂಗಳದ ಮಣ್ಣು ಸಾಗಣೆ; ದಂಡ

ಚಳ್ಳಕೆರೆ: ಬಳ್ಳಾರಿ ರಸ್ತೆ ಮಾರ್ಗದ ಕರೆಕಲ್ ಕೆರೆಯಂಗಳದ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಜೆಸಿಬಿ ವಾಹನ ಸೇರಿ 6 ಟ್ರ್ಯಾಕ್ಟರ್‌ಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ₹ 25 ಸಾವಿರ ದಂಡ ವಿಧಿಸಲಾಗಿದೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾಲ್ಲೂಕಿನ ನಗರಂಗೆರೆ, ಮೀರಾಸಾಬಿಹಳ್ಳಿ, ದೊಡ್ಡೇರಿ, ಬೊಮ್ಮಸಮುದ್ರ, ನನ್ನಿವಾಳದ ಅಜ್ಜನಗುಡಿ ಕೆರೆ, ಚಿಕ್ಕಮಧುರೆ ಸೇರಿ ಹಲವು ಕೆರೆಯಂಗಳದ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮತ್ತು ಭೂಮಿ ಒತ್ತುವರಿಯ ಬಗ್ಗೆ ಆಯಾ ಗ್ರಾಮದ ಜನರಿಂದ ದೂರು ಬಂದಿವೆ. ಹೀಗಾಗಿ ತಾಲ್ಲೂಕಿನ ವಿವಿಧ ಗ್ರಾಮದ ಕೆರೆಯಂಗಳದ ಪರಿಶೀಲನೆ ಮಾಡಲು ಮುಂದಿನ ದಿನಗಳಲ್ಲಿ ಕಂದಾಯ ಅಧಿಕಾರಿಗಳು ಮತ್ತು ಪೋಲಿಸ್ ಅಧಿಕಾರಿಗಳ ತಂಡ ರಚಿಸಲಾಗುವುದು’ ಎಂದರು.
ಕೆರೆಯಂಗಳದ ಮಣ್ಣು ಅಕ್ರಮ ಸಾಗಾಣಿಕೆ ಮತ್ತು ಜಾಗ ಒತ್ತುವರಿಯ ತೆರವು ಕಾರ್ಯಾಚರಣೆ ನಡೆಸಲಾಗುವುದು. ಮಣ್ಣು ಸಾಗಾಣಿಕೆ ಮತ್ತು ಜಾಗ ಅತಿಕ್ರಮಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.