ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಉತ್ತಮ ಮಳೆ: ರಸ್ತೆ ಕುಸಿತ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Published 21 ಮೇ 2024, 3:05 IST
Last Updated 21 ಮೇ 2024, 3:05 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದೆ. ಸತತ ಮಳೆಯಿಂದ ಜಲಮೂಲಗಳಿಗೆ ನೀರು ಹರಿದುಬಂದಿದೆ. ಧರ್ಮಪುರ- ಅರಳೀಕೆರೆ ರಸ್ತೆ ಕುಸಿದಿದ್ದು, ಕಾರೊಂದು ಬೃಹತ್ ಗುಂಡಿಗೆ ಇಳಿದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ರಾತ್ರಿ 10 ಗಂಟೆಯ ಬಳಿಕ ಆರಂಭವಾದ ಮಳೆ ಬಿರುಸು ಪಡೆಯಿತು. ಚರಂಡಿ, ಕಾಲುವೆಗಳು ತುಂಬಿ ಹರಿದವು. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿತ್ತು. ತಿಮ್ಮಣ್ಣನಾಯಕ ಕೆರೆಯ ಸಮೀಪದಲ್ಲಿ ನಿರ್ಮಿಸುತ್ತಿದ್ದ ಟ್ರೀಪಾರ್ಕ್ ಅಸ್ತವ್ಯಸ್ತಗೊಂಡಿದೆ.

ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದೆ. ಧರ್ಮಪುರ- ಅರಳೀಕೆರೆ ಸಂಪರ್ಕ ರಸ್ತೆ ಕುಸಿದಿದೆ. ಧರ್ಮಸ್ಥಳದಿಂದ ತಡರಾತ್ರಿ ಅರಳೀಕೆರೆ ಪಾಳ್ಯಕ್ಕೆ ಇದೇ ಮಾರ್ಗವಾಗಿ ಮರಳಿದ ಕಾರು ಕುಸಿದ ಗುಂಡಿಯಲ್ಲಿ ಇಳಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವೇದಾವತಿ ನದಿ ಪಾತ್ರದಲ್ಲಿ ಉತ್ತಮ ಮಳೆ ಸುರಿದಿದ್ದು, ವಿ.ವಿ. ಸಾಗರ ಜಲಾಶಯಕ್ಕೆ 5,680 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 5 ಸೆಂ.ಮೀ, ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT