ಭಾನುವಾರ, ಫೆಬ್ರವರಿ 28, 2021
20 °C

ಶ್ರೀರಾಂಪುರ: ವ್ಯಕ್ತಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಾಂಪುರ: ಹೋಬಳಿಯ ವೆಂಗಳಾಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. 

ವೆಂಗಳಾಪುರ ಗ್ರಾಮದ ಯೋಗರಾಜ್ (32) ಕೊಲೆಯಾದವರು.

ಆರೋಪಿಗಳಾದ ಚಿದಾನಂದಪ್ಪ, ವಿನಯ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಯೋಗರಾಜ್‌ಗೆ ಚಿದಾನಂದಪ್ಪ ಅವರ ಪತ್ನಿ ಜೊತೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಈ ವಿಷಯವಾಗಿ ಚಿದಾನಂದಪ್ಪ  ಹಾಗೂ ಅವರ ಅಳಿಯ ವಿನಯ್‌ ಯೋಗರಾಜ್‌ ಜತೆ ಜಗಳ ಮಾಡಿ, ಹಲ್ಲೆ ನಡೆಸಿದ್ದಾರೆ. ಮರದ ಕಟ್ಟಿಗೆಯಿಂದ ತಲೆಗೆ ಹೊಡೆದ ಕಾರಣ ಯೋಗರಾಜ್‌ ಗಂಭೀರವಾಗಿ ಗಾಯಗೊಂಡಿದ್ದರು.  ಗ್ರಾಮಸ್ಥರ ನೆರವಿನಿಂದ ಆಸ್ಪತ್ರೆಗೆ ಬಂದ ಯೋಗರಾಜ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ನಂದಗಾವಿ, ಡಿವೈಎಸ್‌ಪಿ ರೋಷನ್ ಜಮೀರ್, ಸಿಪಿಐ ಫೈಜುಲ್ಲಾ, ಪಿಎಸ್‌ಐ ನಾಗರಾಜ್ ಭೇಟಿ ನೀಡಿ, ಪರಿಶೀಲಿಸಿದರು. ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು