ಬುಧವಾರ, ನವೆಂಬರ್ 13, 2019
23 °C
ಚಿತ್ರದುರ್ಗ

ಆರೋಗ್ಯ ಸಚಿವ ಶ್ರೀರಾಮುಲು ಅಡ್ಡಗಟ್ಟಿ ಪ್ರತಿಭಟನೆ; ಕಾಂಗ್ರೆಸ್ ಕಾರ್ಯಕರ್ತರ ಬಂಧನ

Published:
Updated:
ಸಚಿವ ಶ್ರೀರಾಮುಲು ಅವರನ್ನು ಅಡ್ಡಹಾಕಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಚಿತ್ರದುರ್ಗ: ನೆರೆ ಸಂತ್ರಸ್ತರ ಪರಿಹಾರ ಕಾರ್ಯದಲ್ಲಿ ಉಂಟಾಗುತ್ತಿರುವ ವಿಳಂಬವನ್ನು ವಿರೋಧಿಸಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಾರು ಅಡ್ಡಹಾಕಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಗೆ ಸಚಿವರು ಬರುವ ವೇಳೆ ಪ್ರವೇಶ ದ್ವಾರದಲ್ಲಿ ಅವರ ಕಾರನ್ನು ಅಡ್ಡಗಟ್ಟಿ ಘೇರಾವ್ ಹಾಕಲು ಪ್ರಯತ್ನಿಸಿದರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಧಾವಿಸಿದ ಪೊಲೀಸರು 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು.

ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿ ಸೇರಿದಂತೆ ಬಹುತೇಕ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜಿಲ್ಲಾ ಪಂಚಾಯಿತಿಯಲ್ಲಿ ಇದ್ದಿದ್ದರಿಂದ ಪ್ರತಿಭಟನಾಕಾರರು ಇಲ್ಲಿಗೆ ಧಾವಿಸಿದರು.

ಪ್ರತಿಕ್ರಿಯಿಸಿ (+)