ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ: ಚಿತ್ರದುರ್ಗ ಜಿಲ್ಲೆಗೆ ‘ಎ’ ಗ್ರೇಡ್‌

Last Updated 9 ಆಗಸ್ಟ್ 2021, 15:47 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೊರೊನಾ ಸೋಂಕಿನ ಆತಂಕದ ನಡುವೆಯೂ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ‘ಎ’ ಗ್ರೇಡ್‌ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾಗಿದ್ದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಹಿರಿಯೂರಿನ ರಾಷ್ಟ್ರೀಯ ಅಕಾಡೆಮಿ ಆಂಗ್ಲ ಮಾಧ್ಯಮದ ಯು.ಭರತ್ ಹಾಗೂ ಚಳ್ಳಕೆರೆಯ ವಾಸವಿ ಆಂಗ್ಲ ಮಾಧ್ಯಮ ಶಾಲೆಯ ಬಿ.ಎಂ.ಮುಕ್ತ 625 ಕ್ಕೆ 625 ಅಂಕಗಳಿಸಿದ್ದಾರೆ. ಬದಲಾದ ಪರೀಕ್ಷಾ ಪದ್ಧತಿಯನ್ನು ಎದುರಿಸಿ ಆತಂಕದಿಂದಲೇ ಫಲಿತಾಂಶ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಲ್ಲಿ ಮಂದಹಾಸ ಮೂಡಿದೆ.

ಜಿಲ್ಲೆಯಲ್ಲಿ 22,186 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದರು. ಈ ಪೈಕಿ 22,026 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 11,714 ಬಾಲಕರು, 10,312 ಬಾಲಕಿಯರು ಉತ್ತೀರ್ಣರಾಗಿದ್ದಾರೆ. 2019 ಜುಲೈ 19 ಮತ್ತು 22ರಂದು ಪರೀಕ್ಷೆ ನಡೆದಿತ್ತು.

2019–20ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶೇ 88ರಷ್ಟು ಫಲಿತಾಂಶ ಪಡೆದಿತ್ತು. ‘ಎ’ ಗ್ರೇಡ್‌ ಪಡೆದು ರಾಜ್ಯದಲ್ಲಿ ಐದನೇ ಸ್ಥಾನಕ್ಕೆ ಏರಿತ್ತು. ‘ಎ’ ಗ್ರೇಡ್‌ ಉಳಿಸಿಕೊಂಡು ಫಲಿತಾಂಶದ ಪ್ರಮಾಣವನ್ನು ಇನ್ನಷ್ಟು ಸುಧಾರಣೆ ಮಾಡುವ ಪ್ರಯತ್ನಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ.

ಜಿಲ್ಲೆಯ ಎಲ್ಲ 448 ಶಾಲೆಗಳಲ್ಲಿ ಸಹ ಶೇ 100 ರಷ್ಟು ಫಲಿತಾಂಶ ದಾಖಲಾಗಿದೆ. ಈ ಮೂಲಕ ಎಲ್ಲವೂ `ಎ' ಗ್ರೇಡ್ ಪಡೆದಿವೆ.

ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ಕೇಂದ್ರಗಳನ್ನು 87ರಿಂದ 133ಕ್ಕೆ ಹೆಚ್ಚಿಸಲಾಗಿತ್ತು. ಪ್ರತಿ ಮೇಜಿಗೆ ಒಬ್ಬ ವಿದ್ಯಾರ್ಥಿ ಕುಳಿತುಕೊಳ್ಳಲು ಅವಕಾಶ ನೀಡಲಾಗಿತ್ತು. ಕೋವಿಡ್‌ ಪತ್ತೆಯಾದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿಟ್ಟು ಪರೀಕ್ಷೆ ಬರೆಸಲಾಗಿತ್ತು.

***

ಕೋವಿಡ್‌ ಸಂದರ್ಭದಲ್ಲಿಯೂ ಮಕ್ಕಳು ಎದೆಗುಂದದೇ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲರೂ ಉತ್ತೀರ್ಣರಾಗಿರುವುದು ಇತಿಹಾಸ.

ಕೆ.ರವಿಶಂಕರ್‌ ರೆಡ್ಡಿ
ಡಿಡಿಪಿಐ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT