ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭ

Last Updated 13 ಜುಲೈ 2020, 17:41 IST
ಅಕ್ಷರ ಗಾತ್ರ

ಚಿತ್ರದುರ್ಗ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ 3ರಂದು ಮುಕ್ತಾಯವಾಗಿದ್ದು, ಪ್ರಶ್ನೆ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರದಿಂದ ಆರಂಭವಾಗಿದೆ.

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ವಾಸವಿ ವಿದ್ಯಾಸಂಸ್ಥೆ, ವಿದ್ಯಾವಿಕಾಸ ವಿದ್ಯಾಸಂಸ್ಥೆ, ಸಂತ ಜೋಸೆಫರ ಕಾನ್ವೆಂಟ್, ಚಿನ್ಮೂಲಾದ್ರಿ, ಸಂಪಿಗೆ ಸಿದ್ಧೇಶ್ವರ ಪ್ರೌಢಶಾಲೆ ಸೇರಿ ನಗರದ ಆರು ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ.

ಆರೂ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಆಯಾ ವಿಷಯದ ಮೌಲ್ಯಮಾಪನ ನಡೆಯುತ್ತಿದೆ. ಅದಕ್ಕಾಗಿ 1,200ರಿಂದ 1,300 ಮಂದಿ ಶಿಕ್ಷಕರನ್ನು ನಿಯೋಜಿಸಲಾಗಿದೆ.

ಬೆಳಿಗ್ಗೆ 10ರಿಂದ ಆರಂಭವಾಗುವ ಪ್ರಕ್ರಿಯೆ ಸಂಜೆ 5ಕ್ಕೆ ಮುಕ್ತಾಯವಾಗಲಿದೆ. ಒಬ್ಬೊಬ್ಬ ಶಿಕ್ಷಕರು ಕನಿಷ್ಠ 20 ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್‌ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT