ಬುಧವಾರ, ಆಗಸ್ಟ್ 12, 2020
27 °C

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1,299 ವಿದ್ಯಾರ್ಥಿಗಳು ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯ 99 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಥಮ ಭಾಷೆ ವಿಷಯಕ್ಕೆ 1,299 ವಿದ್ಯಾರ್ಥಿಗಳು ಗೈರಾಗಿದ್ದರು.

ಜಿಲ್ಲೆ, ನೆರೆ ರಾಜ್ಯ, ವಲಸೆ ಸೇರಿ ಒಟ್ಟು 21,978 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಈ ಪೈಕಿ 20,680 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ-345, ಚಳ್ಳಕೆರೆ-244, ಹೊಸದುರ್ಗ-246, ಹೊಳಲ್ಕೆರೆ-168, ಹಿರಿಯೂರು-205 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 91 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಕಂಟೈನ್‍ಮೆಂಟ್ ಪ್ರದೇಶಗಳಿಂದ ಬಂದ 25 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ಹಿರಿಯೂರು ತಾಲ್ಲೂಕು ಒಂದರಲ್ಲೇ 24 ವಿದ್ಯಾರ್ಥಿಗಳಿದ್ದಾರೆ. 14 ವಿದ್ಯಾರ್ಥಿಗಳನ್ನು ಅನಾರೋಗ್ಯ ಕಾರಣದಿಂದ ಪ್ರತ್ಯೇಕಿಸಲಾಯಿತು. ಒಟ್ಟು 39 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು.

ನೆರೆ ರಾಜ್ಯಗಳಿಂದ ಬಂದ ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 349 ವಲಸೆ ವಿದ್ಯಾರ್ಥಿಗಳಲ್ಲಿ 343 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 6 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಸರ್ಕಾರಿ ವಸತಿ ಶಾಲೆಗಳಲ್ಲಿ ಉಳಿದುಕೊಂಡು 304 ವಿದ್ಯಾರ್ಥಿಗಳೂ ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷಾ ಅವ್ಯವಹಾರದಲ್ಲಿ ಭಾಗಿಯಾಗಿಲ್ಲ ಎಂದು ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು