ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಬ್‌ಕಾಸ್ಟಿಂಗ್‌ನಲ್ಲಿ SSLC ಪರೀಕ್ಷಾ ನಕಲು ಪತ್ತೆ: ಇಬ್ಬರು ಶಿಕ್ಷಕರ ಅಮಾನತು

Published 30 ಮಾರ್ಚ್ 2024, 13:23 IST
Last Updated 30 ಮಾರ್ಚ್ 2024, 13:23 IST
ಅಕ್ಷರ ಗಾತ್ರ

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರದ ಕರ್ನಾಟಕ ಪಬ್ಲಿಕ್‌ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ ಅಮಾನತುಗೊಳಿಸಿದ್ದಾರೆ.

ಇದೇ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ ಎಸಗಿದ ಖಾಸಗಿ ಶಾಲೆಯ ಇನ್ನೂ ಇಬ್ಬರು ಶಿಕ್ಷಕರ ಅಮಾನತಿಗೆ ಶಿಫಾರಸು ಮಾಡಲಾಗಿದೆ.

ಚಳ್ಳಕೆರೆ ತಾಲ್ಲೂಕಿನ ಪಿ.ಓಬನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ ಹಾಗೂ ಕೊ‍ರ್ಲಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಕಾಶ್‌ ಅಮಾನತುಗೊಂಡ ಶಿಕ್ಷಕರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚಳ್ಳಕೆರೆಯ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರೇವಣ್ಣ ಹಾಗೂ ಗೋಸಿಕೆರೆ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಶಿಕ್ಷಕ ರಾಘವೇಂದ್ರ ಅವರನ್ನು ಅಮಾನತುಗೊಳಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಡಿಡಿಪಿಐ ಶಿಫಾರಸು ಮಾಡಿದ್ದಾರೆ.

ಎಸ್ಸೆಸ್ಸೆಲ್ಸಿಯ ವಿಜ್ಞಾನ ವಿಷಯದ ಪರೀಕ್ಷೆ ಶನಿವಾರ ನಡೆಯುತ್ತಿತ್ತು. ಪರಶುರಾಂಪುರದ ಕರ್ನಾಟಕ ಪಬ್ಲಿಕ್‌ ಶಾಲೆಯ ಪರೀಕ್ಷಾ ಕೇಂದ್ರದ ಕರ್ತವ್ಯಕ್ಕೆ ನಾಲ್ವರು ಶಿಕ್ಷಕರು ನಿಯೋಜನೆಗೊಂಡಿದ್ದರು. ಪರೀಕ್ಷಾ ಕೊಠಡಿ 1, 14, 16 ಹಾಗೂ 18ರಲ್ಲಿ ಪರೀಕ್ಷಾ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕೊಠಡಿಯ ಮೇಲ್ವಿಚಾಕರು ಸಹಕಾರ ನೀಡುತ್ತಿದ್ದರು. ಈ ದೃಶ್ಯವನ್ನು ಕೊಠಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ಮೂಲಕ ಡಿಡಿಪಿಐ ಕಚೇರಿ ಸಿಬ್ಬಂದಿ ವೀಕ್ಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT