ನಾಯಕನಹಟ್ಟಿ: ‘ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ರೂಪಿಸಿರುವ 29 ಅಂಶಗಳ ಕಾರ್ಯಕ್ರಮವನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆಯ ಸಹ ನಿರ್ದೇಶಕಿ ಹನುಮಕ್ಕ ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ಪ್ರೌಢಶಾಲೆಗಳಿಗೆ ಗುರುವಾರ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಕಲಿಕಾ ಪ್ರಗತಿ ಪರಿಶೀಲಿಸಿದರು.

‘ರಾಜ್ಯದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. 29 ಅಂಶಗಳ ಕಾರ್ಯಕ್ರಮವನ್ನೂ ಜಾರಿಗೊಳಿಸಿದೆ. ಶಿಕ್ಷಕರು ಕಡ್ಡಾಯವಾಗಿ ಈ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಿ ಫಲಿತಾಂಶ ಹೆಚ್ಚಿಸಲು ಶ್ರಮಿಸಬೇಕು. ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಆಧರಿಸಿ ಬೋಧನೆಯಲ್ಲಿ ಸುಧಾರಣೆ ತಂದು ಅವರಿಗೆ ಮನದಟ್ಟು ಮಾಡಿಸಬೇಕು. ವಿದ್ಯಾರ್ಥಿಗಳು ವಿಷಯ ಕ್ಲಿಷ್ಟಕರ ಎನಿಸಿದರೆ ಶಿಕ್ಷಕರೊಂದಿಗೆ ಚರ್ಚಿಸಿ ಮನನ ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಬ್ಯಾಗ್ಗಳನ್ನು ವಿತರಿಸಲಾಯಿತು. ಶಿಕ್ಷಣ ಸಂಯೋಜಕರಾದ ತಿಪ್ಪೇಸ್ವಾಮಿ, ಸಮೂಹ ಸಂಪನ್ಮೂಲ ವ್ಯಕ್ತಿ ಈಶ್ವರಪ್ಪ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.