ಚಿತ್ರದುರ್ಗ: ನಗರದಲ್ಲಿ ಆಗಸ್ಟ್ 22ರಿಂದ 3 ದಿನಗಳವರೆಗೆ 6ನೇ ರಾಜ್ಯ ಮಟ್ಟದ ಯೋಗಾಸನ ಚಾಂಪಿಯನ್ಷಿಪ್ ನಡೆಯಲಿದೆ.

‘ಇಲ್ಲಿನ ಮುರುಘಾ ಮಠದ ಅನುಭವ ಮಂಟಪದಲ್ಲಿ ನಮ್ಮ ಸಂಸ್ಥೆಯಿಂದ ಚಾಂಪಿಯನ್ಷಿಪ್ ಹಮ್ಮಿಕೊಂಡಿದ್ದೇವೆ’ ಎಂದು ರಾಜ್ಯ ಯೋಗಾಸನ ಸಂಸ್ಥೆಯ ಕಾರ್ಯದರ್ಶಿ ಎಂ.ನಿರಂಜನಮೂರ್ತಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿಯ ಯೋಗಗುರು, ಆಯುರ್ವೇದ ಪಂಡಿತ ರಾಘವೇಂದ್ರ ಸ್ವಾಮೀಜಿ ಸ್ಮರಣಾರ್ಥ ಸ್ಪರ್ಧೆ ಆಯೋಜಿಸಲಾಗಿದೆ. ವಿವಿಧ ಜಿಲ್ಲೆಗಳ 800ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ’ ಎಂದರು.

‘8 ರಿಂದ 55 ವರ್ಷದೊಳಗಿನ ಸ್ಪರ್ಧಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ 8 ವಿಭಾಗಗಳಲ್ಲಿ 10 ವಿವಿಧ ಸ್ಪರ್ಧೆಗಳು ನಡೆಯಲಿವೆ. ಇಲ್ಲಿ ಗೆಲುವು ಸಾಧಿಸಿದವರು ಛತ್ತೀಸಗಢ ಮತ್ತು ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.

‘1995ರ ನಂತರ ಚಿತ್ರದುರ್ಗದಲ್ಲಿ ಮೊದಲ ಬಾರಿಗೆ ಯೋಗಾಸನ ಚಾಂಪಿಯನ್ಷಿಪ್ ನಡೆಯುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸಿರುವ 80 ತೀರ್ಪುಗಾರರು ಭಾಗವಹಿಸಲಿದ್ದಾರೆ. ಚಾಂಪಿಯನ್ಷಿಪ್ನ ಉದ್ಘಾಟನಾ ಸಮಾರಂಭದಲ್ಲಿ ಸಚಿವರಾದ ಮಧು ಬಂಗಾರಪ್ಪ, ಸಂತೋಷ್ ಲಾಡ್, ಸಂಸದ ಗೋವಿಂದ ಕಾರಜೋಳ, ಶಾಸಕ ಕೆ.ಸಿ. ವೀರೇಂದ್ರ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.