ಮೊಳಕಾಲ್ಮುರು: ‘ಮಕ್ಕಳು ಹಾಗೂ ಕುಟುಂಬದ ಭವಿಷ್ಯದ ದೃಷ್ಟಿಯಿಂದ ಗುಳೆ ಹೋಗುವುದನ್ನು ಕೈಬಿಟ್ಟು ಸ್ಥಳೀಯವಾಗಿ ಜೀವನ ಕಟ್ಟಿಕೊಳ್ಳಲು ಕಾರ್ಮಿಕರು ಮುಂದಾಗಬೇಕು’ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.

ತಾಲ್ಲೂಕಿನ ತಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮದೇವರಹಳ್ಳಿಯಲ್ಲಿ ಮಂಗಳವಾರ ತಾಲ್ಲೂಕಿನ 2025– 26ನೇ ಸಾಲಿನ ಉದ್ಯೋಗಖಾತ್ರಿ ಯೋಜನೆ ಕಾಮಗಾರಿಗಳಿಗೆ ಮತ್ತು ಗ್ರಾಮದ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಳೆಯಾಶ್ರಿತ ಮತ್ತು ಕಡಿಮೆ ಮಳೆ ಬೀಳುವ ಇಲ್ಲಿ ಜಲ ಮರುಪೂರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ₹ 20 ಲಕ್ಷ ವೆಚ್ಚದಲ್ಲಿ ಈ ಕೆರೆ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದೆ. ಇಂತಹ ಕಾರ್ಯಗಳಿಂದ ಸ್ಥಳೀಯವಾಗಿ ಕೆಲಸ ಸಿಗುವ ಜತೆಗೆ ಗ್ರಾಮಕ್ಕೂ ಅನುಕೂಲವಾಗಲಿದೆ. ಕಾರ್ಮಿಕರು ಸಹಭಾಗಿತ್ವ ವಹಿಸಬೇಕು ಮತ್ತು ಇಂತಹ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಬೇಕು’ ಎಂದು ಹೇಳಿದರು.

‘20 ವರ್ಷಗಳ ಹಿಂದೆ ಯುಪಿಎ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಮಾತ್ರ ಉದ್ಯೋಗಖಾತ್ರಿ ಯೋಜನೆ ಮಂಜೂರಾಗಿತ್ತು. ಆಗ ಸಂಸತ್ ಸದಸ್ಯರಾಗಿದ್ದ ಎನ್.ವೈ. ಹನುಮಂತಪ್ಪ ಶ್ರಮದಿಂದ ಚಿತ್ರದುರ್ಗ ಜಿಲ್ಲೆ ಪ್ರಥಮ ಹಂತದಲ್ಲಿ ಸೇರ್ಪಡೆಯಾಯಿತು. ಯೋಜನೆ ದಾರಿ ತಪ್ಪದಂತೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಇಒ ಎಚ್.ಹನುಮಂತಪ್ಪ, ಸಹಾಯಕ ನಿರ್ದೇಶಕ ಗಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಮ್ಮ, ಸದಸ್ಯರಾದ ಗುರುಲಿಂಗಪ್ಪ, ನಾಗೇಂದ್ರಪ್ಪ, ಪಿಡಿಒ ನಾಗೇಂದ್ರಪ್ಪ, ರೇಷ್ಮೆ ವಿಸ್ತರಣಾಧಿಕಾರಿ ಮಹೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.