ಚಿತ್ರದುರ್ಗ: ‘ಖಾಸಗಿ ಶೈಕ್ಷಣಿಕ ಸಂಸ್ಥೆಗಳು ಪ್ರವೇಶ ಶುಲ್ಕದ ಮಾಹಿತಿಯನ್ನು ಕಡ್ಡಾಯವಾಗಿ ಪ್ರಚುರಪಡಿಸಬೇಕು. ಒಂದು ಬಾರಿ ಎನ್ನುವ ನೆಪದಲ್ಲಿ ಡೋನೇಷನ್ ಪಡೆದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಖಾಸಗಿ ಅನುದಾನ ರಹಿತ ಶಾಲೆಗಳು ಸರ್ಕಾರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸರ್ಕಾರದ ನಿಯಮಾವಳಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಜರುಗಿಸಲಾಗುವುದು. ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡಬೇಕು. ನಾಮಕಾವಸ್ಥೆಗೆ ಶಿಕ್ಷಣ ಸಂಸ್ಥೆ ನಡೆಸುವುದು, ಉತ್ತಮ ಫಲಿತಾಂಶಕ್ಕೆ ಪಡೆಯಲು ಗಮನಹರಿಸದೇ ಇರುವುದು, ಶಿಕ್ಷಕರಿಗೆ ಓರಿಯಂಟೇಷನ್ ಕಾರ್ಯಾಗಾರ ನಡೆಸದಿರುವ ಶಾಲೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದರು.

‘ಅರ್ಹತೆ ಇಲ್ಲದೇ ಇರುವ ಶಿಕ್ಷಕರ ನೇಮಕ ಮಾಡಿಕೊಂಡಿರುವ ಬಗ್ಗೆ ಶಿಕ್ಷಣ ಸಂಸ್ಥೆಗಳ ವಿರುದ್ಧ ದೂರುಗಳು ಬಂದಿವೆ. ಶಾಲಾ ದಾಖಲಾತಿ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು. ಮುಖ್ಯವಾಗಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ ನೀಡಬೇಕು. ಬೋಧನಾ ಕೌಶಲಗಳ ಅಭಿವೃದ್ಧಿಗಾಗಿ ಪುಶ್ಚೇತನ ಕಾರ್ಯಾಗಾರ ನಡೆಸಬೇಕು’ ಎಂದರು.

‘ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮಾವಳಿ ಪ್ರಕಾರದ ದಾಖಲಾತಿ ಪ್ರಕ್ರಿಯೆ ನಿರ್ವಹಿಸಲಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಲು ತಾಲ್ಲೂಕುವಾರು ನೋಡಲ್ ಅಧಿಕಾರಿಗಳ ನೇಮಕ ಮಾಡಿ ಪರಿಶೀಲನೆ ನಡೆಸಲಾಗುವುದು. ನಿಯಮ ಉಲ್ಲಂಘನೆ ಕಂಡುಬಂದರೆ ಶಾಶ್ವತವಾಗಿ ಶಿಕ್ಷಣ ಸಂಸ್ಥೆ ಮುಚ್ಚಿಸಲು ಕ್ರಮಕೈಗೊಳ್ಳಲಾಗುವುದು. ಸೀಟುಗಳ ಲಭ್ಯತೆ ಮತ್ತು ಪ್ರವೇಶಾತಿ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಶಾಲಾ ಫಲಕದಲ್ಲಿ ಪ್ರಕಟಿಸಬೇಕು’ ಎಂದರು.

‘ಶಾಲಾ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದಂತಹ ಪ್ರಕರಣ ತಪ್ಪಿಸಲು ಶಾಲಾ ಪರಿಮಿತಿಯಲ್ಲಿ ಇ ಆಡಳಿತ ಮಂಡಳಿಗಳು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಖಾಸಗಿ ಶಾಲೆಗಳಲ್ಲಿ ನಿಗದಿತ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು’ ಎಂದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ಮಾತನಾಡಿ ‘ಜಿಲ್ಲೆಯಲ್ಲಿ ಅನುದಾನ ರಹಿತ ಶಾಲೆಗಳಲ್ಲಿ 252 ಪ್ರಾಥಮಿಕ ಶಾಲೆಗಳು ಹಾಗೂ 138 ಪ್ರೌಢಶಾಲೆಗಳಿವೆ. ಪ್ರತಿ ವರ್ಷ ದಾಖಲಾತಿ ಪ್ರಕ್ರಿಯೆಯಲ್ಲಿ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮೀಸಲಾತಿ ಅನ್ವಯಿಸಿ ದಾಖಲಾತಿ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಎಲ್ಕೆಜಿ ಮತ್ತು 1ನೇ ತರಗತಿಗೆ ದಾಖಲಾತಿ ಪ್ರಕ್ರಿಯೆ ನಿರ್ವಹಿಸುವಾಗ ಪ್ರವೇಶ ಪರೀಕ್ಷೆ, ಸಂದರ್ಶನ ನಡೆಸಬಾರದು’ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಸಿದ್ದಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.