ಮುಷ್ಕರ | ನಗರ ಸ್ಥಳೀಯ ಸಂಸ್ಥೆ ನೌಕರರೊಂದಿಗೆ ಚರ್ಚೆ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ನಗರ ಸ್ಥಳೀಯ ಸಂಸ್ಥೆಗಳ ನೀರಗಂಟಿ ಹಾಗೂ ಸ್ವಚ್ಛತಾ ಸಿಬ್ಬಂದಿ ಸಮಸ್ಯೆ ಗಮನಕ್ಕೆ ಬಂದಿದೆ. ಮುಷ್ಕರಕ್ಕೆ ಮುಂದಾಗಿರುವ ಅವರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹೊಳಲ್ಕೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತಿಭಟನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇಂತಹ ಹೋರಾಟವನ್ನು ನಾವೂ ನೋಡುತ್ತಿದ್ದೇವೆ. ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡಲಿದ್ದೇವೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
'ತೋಟಗಾರಿಕಾ ಬೆಳೆಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಉತ್ತೇಜನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಗಡದ ರೈತರಿಗೆ ಶೇ 90 ಸಬ್ಸಿಡಿ ಹಾಗೂ ಉಳಿದ ವರ್ಗಕ್ಕೆ ಶೇ 75ರಷ್ಟು ಸಬ್ಸಿಡಿ ಸಿಗುತ್ತಿದೆ. ಈ ಸಹಾಯಧನವನ್ನು ಬಯಲುಸೀಮೆ ಅಡಿಕೆ ಬೆಳೆಗೂ ವಿಸ್ತರಣೆ ಮಾಡುವ ಕುರಿತು ಪರಿಶೀಲನೆ ನಡೆಸಲಾಗುವುದು' ಎಂದು ಮಾಹಿತಿ ನೀಡಿದರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.