ಪ್ರಜಾವಾಣಿ ವಾರ್ತೆ

ಚಳ್ಳಕೆರೆ: ನಗರದ ವೀರಶೈವ ಮಹಿಳಾ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕಾಲುವೆಹಳ್ಳಿ ಗ್ರಾಮದ ಶತಾಯುಷಿ ಸೂಲಗಿತ್ತಿ ತಿಮ್ಮಕ್ಕ ಅವರನ್ನು ಸನ್ಮಾನಿಸಲಾಯಿತು.

ಸಂಸ್ಕೃತಿ ಮತ್ತು ಸಂಪ್ರದಾಯ ಮುಂದುವರಿಕೆಯಲ್ಲಿ ಮಹಿಳೆಯ ಪಾತ್ರದ ಬಗ್ಗೆ ವೀರಶೈವ ಮಹಿಳಾ ಸಂಘದ ನಿರ್ದೇಶಕಿ ಗೀತಾ ಪ್ರಕಾಶ್ ವಿಶೇಷ ಉಪನ್ಯಾಸ ನೀಡಿದರು.

‘ಭಾರತೀಯ ಸನಾತನ ಸಂಸ್ಕೃತಿ ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಜೀವನದಲ್ಲಿ ಆಚರಣೆಗೆ ತರುವ ಮೂಲಕ ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು. ಮಕ್ಕಳಲ್ಲಿ ಉತ್ತಮ ಸಾಂಸ್ಕೃತಿಕ ಮೌಲ್ಯಗಳನ್ನು ತುಂಬಬೇಕು. ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿ ಅವರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ಮಾಡಬೇಕು’ ಎಂದು ಹೇಳಿದರು.

ವೀರಶೈವ ಮಹಿಳಾ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಪದ್ಮ ನಾಗರಾಜ್, ಕಾರ್ಯದರ್ಶಿ ಮಂಜುಳಾ ನಾಗರಾಜ್, ನಿರ್ದೇಶಕರಾದ ಗೀತಾ ಪ್ರಕಾಶ್, ಸುನೀತಾ, ಸುಮಾ, ಮಮತಾ, ವನಜಾ, ಸೌಮ್ಯಲತಾ, ಮಂಗಳಾ, ಕವಿತಾ, ಕಾಲುವೆಹಳ್ಳಿ ಪಾಲಕ್ಕ, ಕರೀಕೆರೆ ಮಂಜುಳಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.