ಗುರುವಾರ , ಏಪ್ರಿಲ್ 15, 2021
24 °C

ಲೈಂಗಿಕ ಕಿರುಕುಳ ಆರೋಪ, ದಂಪತಿ ಆತ್ಮಹತ್ಯೆ ಯತ್ನ: ಪತಿ ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಪರಪುರುಷನ ಲೈಂಗಿಕ ಕಿರುಕುಳದಿಂದ ಮನನೊಂದು ಸೆಲ್ಫಿ ವಿಡಿಯೊ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪತಿ ಮೈಲಾರಪ್ಪ (40) ಮೃತಪಟ್ಟಿದ್ದು, ಪತ್ನಿ ಸರೋಜಮ್ಮ (35) ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸದುರ್ಗ ತಾಲ್ಲೂಕಿನ ಕೊಂಡಾಪುರದ ದಂಪತಿ ಆತ್ಮಹತ್ಯೆಗೆ ಶರಣಾಗುವುದಾಗಿ ಸೆಲ್ಫಿ ವಿಡಿಯೊ ಮಾಡಿ ನಾಪತ್ತೆಯಾಗಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ತೋಣಚೇನಹಳ್ಳಿ ಬಳಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಇವರು ಪತ್ತೆಯಾಗಿದ್ದಾರೆ.

ಮೈಲಾರಪ್ಪ ಅವರು ಕೆಎಸ್ಆರ್ಟಿಸಿ ಬಸ್ ಚಾಲಕರಾಗಿದ್ದರು. ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.