ಚಿತ್ರದುರ್ಗ: ‘ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವರ್ಷಗಳಾಗಿದ್ದು, ಮಂಡಳಿಯ ಸುವರ್ಣ ಮಹೋತ್ಸವನ್ನು ನ.5 ರಂದು ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಸಲು ಉದ್ದೇಶಸಲಾಗಿದೆ. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕೆಂದು’ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುವರ್ಣ ಮಹೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂದು ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳು ಜಂಟಿಯಾಗಿ ಕಾರ್ಯಕ್ರಮ ನಡೆಸಲಿದ್ದು, ಅರಣ್ಯ ಸಚಿವ ಈಶ್ವರ ಖಂಡ್ರೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ ಆಗಮಿಸಲಿದ್ದಾರೆ ಎಂದರು.

‘ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಎನ್ಸಿಸಿ, ಎನ್ಎಸ್ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಗ್ರಾಮ ಪಂಚಾಯತಿ ಜನಪ್ರತಿನಿಧಿಗಳು, ಸ್ವ–ಸಹಾಯ ಸಂಘಗಗಳ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಅಧಿಕಾರಿಗಳ ತಂಡ ಹಾಗೂ ಸ್ವಯಂ ಸೇವಕರು ಹೆಚ್ಚಿನ ಕಾಳಜಿ ವಹಿಸಿ ಆಹಾರ, ನೀರು ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು’ ಎಂದು ತಿಳಿಸಿದರು.

‘ಪರಿಸರ ಮಾಲಿನ್ಯ ಸಮಸ್ಯೆಗಳಾದ ಘನ ತ್ಯಾಜ್ಯ, ಜಲ ಮಾಲಿನ್ಯ, ಇ–ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ಇತ್ಯಾದಿಗಳ ಬಗ್ಗೆ ಅರಿವು ಮೂಡಿಸಬೇಕು. ಉಪವಿಭಾಗಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು. ಮೈದಾನವನ್ನು ಸ್ವಚ್ಛಗೊಳಿಸಲು ಹಾಗೂ ಆಗಮಿಸುವ ಗಣ್ಯ ವ್ಯಕ್ತಿಗಳು ಮತ್ತು ಸಾರ್ವಜನಿಕರು ಸಂಚರಿಸುವ ರಸ್ತೆಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು’ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ಗೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಂಗಸ್ವಾಮಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಲಯ ಹಿರಿಯ ಪರಿಸರ ಅಧಿಕಾರಿ ರಮೇಶ್ ನಾಯಕ್, ಪರಿಸರ ಅಧಿಕಾರಿ ಆಸಿಫ್ ಖಾನ್, ಸಹಾಯಕ ಪರಿಸರ ಅಧಿಕಾರಿ ರಾಜೇಶ್ ಇದ್ದರು.

ಪರಿಸರ ಸಂರಕ್ಷಣೆಗೆ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಸಂಸ್ಥೆಗಳನ್ನು ಗುರುತಿಸಿ ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಯ ತಲಾ ಮೂರು ಗಣ್ಯರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು.
-ಟಿ.ವೆಂಕಟೇಶ್, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.