ಚಿತ್ರದುರ್ಗ: ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಕುಪಿತಗೊಂಡ ಮೊಳಕಾಲ್ಮುರು ತಹಶೀಲ್ದಾರ್ ಮಲ್ಲಿಕಾರ್ಜುನ್ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭಾನುವಾರ ಚಿತ್ರದುರ್ಗದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ತಹಶೀಲ್ದಾರ್ ಕುಡಿದು ಹಲ್ಲೆ ನಡೆಸಿದ್ದಾರೆ ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಸಿದ್ದಾರೆ. ಸರ್ವಿಸ್ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ತಹಶೀಲ್ದಾರ್ ಕಾರು ಬಂದಿದೆ. ಈ ವೇಳೆ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಇದರಿಂದ ಕುಪಿತಗೊಂಡ ಮಲ್ಲಿಕಾರ್ಜುನ್ ಲಾರಿ ಚಾಲಕನ ಮುಖಕ್ಕೆ ಗುದ್ದಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ತಹಶೀಲ್ದಾರ್ ವರ್ತನೆಯನ್ನು ಪ್ರಶ್ನಿಸಿದ್ದಾರೆ. ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.