ಚಿತ್ರದುರ್ಗ: ತಾಲ್ಲೂಕಿನ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಗುರುವಾರ ಬೆಳಿಗ್ಗೆ ಇನ್ನೊವಾ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡು ಮೂಲದ ಮೂವರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ.
.ಅಪಘಾತ: ಗಾಯಾಳುಗಳ ಆಸ್ಪತ್ರೆಗೆ ತಲುಪಿಸಿದ ಶಾಸಕ ಎ.ಆರ್ ಕೃಷ್ಣಮೂರ್ತಿ .
ತಮಿಳುನಾಡು, ಕೃಷ್ಣಗಿರಿ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಅರ್ಜುನ್ (35), ಶರಣ್ (28), ಶ್ರೀಧರ್ (28) ಮೃತಪಟ್ಟವರು. ಐವರು ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಅಪಾಯದಿಂದ ಪಾರಾಗಿದ್ದಾರೆ.

9 ಜನರ ತಂಡ ಗೋವಾಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಅರ್ಜುನ್ ಕಾರು ಚಾಲನೆ ಮಾಡುತ್ತಿದ್ದರು. ಸೀಬಾರ ಬಳಿಯ ಗೋಶಾಲೆ ಮುಂಭಾಗದಲ್ಲೇ ಘಟನೆ ನಡೆದಿದೆ. ಟೈರ್ ಸ್ಫೋಟಗೊಂಡ ಕೂಡಲೇ ಕಾರು ಡಿವೈಡರ್ಗೆ ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಉರುಳಿದೆ. ಈ ವೇಳೆ ಪಕ್ಕದ ರಸ್ತೆಯಲ್ಲಿ ಯಾವುದೇ ವಾಹನ ಬರುತ್ತಿರಲಿಲ್ಲ, ಹೀಗಾಗಿ ಹೆಚ್ಚಿನ ಅಪಾಯ ತಪ್ಪಿದೆ.
.ತಿರುಪತಿ ಬಳಿ ಅಪಘಾತ: ಹಾಸನದ ಸಬ್ಬನಹಳ್ಳಿಯ ಒಂದೇ ಕುಟುಂಬದ ಮೂವರು ಸಾವು .
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಜೈಲಿನಿಂದ ಬಿಡುಗಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.