ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಗೆರೆ: ‘ತರಳಬಾಳು ಹುಣ್ಣಿಮೆ’ಗೆ ಚಾಲನೆ

Last Updated 14 ಫೆಬ್ರುವರಿ 2022, 20:00 IST
ಅಕ್ಷರ ಗಾತ್ರ

ಸಿರಿಗೆರೆ (ಚಿತ್ರದುರ್ಗ): ತರಳಬಾಳು ಮಠದ ಬಹುನಿರೀಕ್ಷಿತ ‘ತರಳಬಾಳು ಹುಣ್ಣಿಮೆ’ ಉತ್ಸವ ಮಠದ ಆವರಣದಲ್ಲಿ ಸೋಮವಾರ ಆರಂಭವಾಯಿತು. ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಹಲವೆಡೆಯಿಂದ ಭಕ್ತರು ಸಿರಿಗೆರೆಗೆ ಧಾವಿಸಿದ್ದಾರೆ.

ಗುರುಶಾಂತೇಶ್ವರ ದಾಸೋಹ ಭವನದಲ್ಲಿ ಮೊದಲ ದಿನದ ವಿಚಾರಗೋಷ್ಠಿ ಹಾಗೂ ಕನ್ನಡ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಸಂಜೆ ಆಯೋಜಿಸಿದ್ದ ಸಾಂಸ್ಕೃತಿಕ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡಿದ್ದರು.

‘ನೀರಾವರಿ, ಪರಿಸರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾಡಿದ ಕಾರ್ಯ ಅನನ್ಯ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಹಲವು ಕೆರೆ ತುಂಬಿಸುವ ಯೋಜನೆಗಳು ಅನುಷ್ಠಾನಕ್ಕೆ ಬರುವಲ್ಲಿ ಸ್ವಾಮೀಜಿ ಅವರ ಶ್ರಮವಿದೆ. ರಾಜ್ಯದ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸಲು ಸ್ವಾಮೀಜಿ ಸ್ಫೂರ್ತಿ ತುಂಬಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಎಲ್ಲ ಕೆರೆ ಮತ್ತು ಕಲ್ಯಾಣಿಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಈಶ್ವರಪ್ಪ ಘೋಷಣೆ ಮಾಡಿದರು.

‘ಹಿಂದೂ– ಮುಸ್ಲಿಂ ಅಂತರ ಆತಂಕಕಾರಿ’:
‘ಹಿಜಾಬ್‌ ವಿಚಾರಕ್ಕೆ ಹಿಂದೂ ಮತ್ತು ಮುಸ್ಲಿಂ ಧರ್ಮೀಯರ ನಡುವೆ ಸೃಷ್ಟಿಯಾದ ಕಂದಕ ಆತಂಕಕಾರಿ ಬೆಳವಣಿಗೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಕಳವಳ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT