ಸಿರಿಗೆರೆ: ತರಳಬಾಳು ಮಠದ ಕುರಿತು ಕೆಲವರು ಅಪಪ್ರಚಾರದಲ್ಲಿ ತೊಡಗಿದ್ದು, ಇದು ಬಂಡವಾಳಶಾಹಿಗಳು ಮತ್ತು ನಿಷ್ಠಾವಂತ ಭಕ್ತರ ನಡುವಿನ ಸಂಘರ್ಷವಾಗಿದೆ ಎಂದು ತರಳಬಾಳು ಮಠದ ಕಾರ್ಯದರ್ಶಿ ವಾಗ್ದಾಳಿ ನಡೆಸಿದ್ದಾರೆ.
ಸಾಧು ಸದ್ಧರ್ಮ ಸಂಘದ ಬೈಲಾ ಮತ್ತು ಮಠದ ಟ್ರಸ್ಟ್ ಡೀಡ್ ಬಗ್ಗೆ ಅನೇಕ ಬಾರಿ ಸ್ಪಷ್ಟೀಕರಣ ನೀಡಿದ್ದರೂ ಪದೇ ಪದೇ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಅವ್ಯಾಹತವಾಗಿ ಅಪಪ್ರಚಾರ ನಡೆಸಲಾಗುತ್ತಿದ್ದು, ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವು ಬಂಡವಾಳಶಾಹಿಗಳು ಮಠದ ಮೇಲೆ ಹಿಡಿತ ಸಾಧಿಸಿ, ತಮ್ಮ ಸ್ವಾರ್ಥ ಸಾಧಿಸಿಕೊಳ್ಳಲು ನಡೆಸುತ್ತಿರುವ ಹುನ್ನಾರ ಎಂದು ಕಾರ್ಯದರ್ಶಿ ಹರಿಹಾಯ್ದಿದ್ದಾರೆ.