ಹಿರಿಯೂರು: ನಗರದ ತೇರುಮಲ್ಲೇಶ್ವರ ಪತ್ತಿನ ಸಹಕಾರ ಸಂಘವು 2023–24ನೇ ಸಾಲಿನಲ್ಲಿ ₹ 3.17 ಕೋಟಿ ವಹಿವಾಟು ನಡೆಸುವ ಮೂಲಕ ₹ 8.70 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ. ತಿಪ್ಪೇಸ್ವಾಮಿ ಹೇಳಿದರು.
ನಗರದ ರೋಟರಿ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿ ಹಾಜರಿದ್ದರು.