ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಣ ತಿವಿದು ವ್ಯಕ್ತಿ ಸಾವು

Published 1 ಮೇ 2024, 17:21 IST
Last Updated 1 ಮೇ 2024, 17:21 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಾತ್ರೆಗೆ ತಂದಿದ್ದ ದೇವರ ಕೋಣ ತಿವಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಮದಕರಿಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ನಿವಾಸಿ ಕೊಲ್ಲರಪ್ಪ (65) ಮೃತರು. ಗ್ರಾಮದೇವತೆ ಕೊಲ್ಲಾಪುರದಮ್ಮ ಜಾತ್ರೆ ನಡೆಯುತ್ತಿದ್ದು, ಸಂಪ್ರದಾಯದಂತೆ ಬುಧವಾರ ಬೆಳಗಿನಜಾವ ಕೋಣವನ್ನು ದೇವಸ್ಥಾನದ ಬಳಿ ಕಟ್ಟಲು ಕೊಲ್ಲರಪ್ಪ ಹಿಡಿದುಕೊಂಡು ಹೊರಟಿದ್ದಾರೆ. ಈ ವೇಳೆ ಕೋಣ ಅವರ ತೊಡೆಯ
ಭಾಗಕ್ಕೆ ತಿವಿದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದರೆ. ಈ ಕುರಿತು ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT