ಶುಕ್ರವಾರ, ಅಕ್ಟೋಬರ್ 29, 2021
20 °C

ಸಾಲದ ಹೊರೆ: ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಿಯಬ್ಬೆ (ಧರ್ಮಪುರ): ಇಲ್ಲಿನ ನಿವಾಸಿ ಗೋವಿಂದಪ್ಪ (50) ಸಾಲದ ಹೊರೆ ತಾಳಲಾರದೇ ವಿಷ ಕುಡಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಗೋವಿಂದಪ್ಪ ವಿವಿಧ ಸಂಘ ಸಂಸ್ಥೆಗಳಲ್ಲಿ ಮತ್ತು ಖಾಸಗಿಯಾಗಿ ₹ 6 ಲಕ್ಷ ಸಾಲ ಮಾಡಿದ್ದು, ಮಳೆಯಾಗದೇ ಬೆಳೆ ಬಾರದೇ ಇದ್ದುದರಿಂದ ಗುರುವಾರ ಮಧ್ಯರಾತ್ರಿ ತಮ್ಮ ಜಮೀನಿನಲ್ಲಿ ವಿಷ ಕುಡಿದಿದ್ದಾರೆ.

ತಕ್ಷಣ ಅವರನ್ನು ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಯಿತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನಪ್ಪಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು