ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ: ಜಗಳ ಬಿಡಿಸಲು ಹೋದ ವ್ಯಕ್ತಿ ಸಾವು

Published 11 ಜೂನ್ 2024, 16:02 IST
Last Updated 11 ಜೂನ್ 2024, 16:02 IST
ಅಕ್ಷರ ಗಾತ್ರ

ಚಳ್ಳಕೆರೆ: ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ನಡೆಯುತ್ತಿದ್ದ ಜಗಳ ಬಿಡಿಸಲು ಬಂದ ವ್ಯಕ್ತಿಯ ಕಪಾಳಕ್ಕೆ ಹೊಡೆದ ಪರಿಣಾಮ, ಅವರು ಮೃತಪ‌ಟ್ಟ ಘಟನೆ ನಡೆದಿದೆ.

ತಾಲ್ಲೂಕಿನ ಗೋಪನಹಳ್ಳಿ ಗ್ರಾಮದ ಬಿ.ತಿಪ್ಪೇಸ್ವಾಮಿ (47) ಮೃತ ವ್ಯಕ್ತಿ. 

‘ಗ್ರಾಮದ ಜಿ.ಶಶಿ ಎಂಬುವರು ಏಕಾಏಕಿ ಮನೆಗೆ ನುಗ್ಗಿ ಗಲಾಟೆ ಮಾಡಿ, ಪುತ್ರ ದಿನೇಶ್‌ಗೆ ಹೊಡೆದಿದ್ದಲ್ಲದೆ, ಅನಾರೋಗ್ಯದಿಂದ ಬಳಲುತ್ತಿದ್ದ ಪತಿ ಬಿ.ತಿಪ್ಪೇಸ್ವಾಮಿ ಅವರ ಕಪಾಳಕ್ಕೆ ಬಲವಾಗಿ ಹೊಡೆದಿದ್ದರಿಂದ ಅವರು ಮೃಪಟ್ಟಿದ್ದಾರೆ’ ಎಂದು ಮೃತರ ಪತ್ನಿ ಲಕ್ಕಮ್ಮ ಠಾಣೆಗೆ ದೂರು ನೀಡಿದ್ದಾರೆ.

ಪತಿ ಸಾವಿಗೆ ಕಾರಣರಾದ ಜಿ.ಶಶಿ, ಎಂ.ರಾಜ ಹಾಗೂ ಜಿ.ಅಶೋಕ ಎಂಬುವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪಿಎಸ್‍ಐ ಸತೀಶ್‍ನಾಯ್ಕ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT