ತಿಪಟೂರು: ನಗರದ ಕೆ.ಆರ್. ಬಡಾವಣೆಯ ಬಯಲು ರಂಗಮಂದಿರದಲ್ಲಿ ಜನಸ್ಪಂದನ ಟ್ರಸ್ಟ್‌ನಿಂದ ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಗೀತನಮನ ಕಾರ್ಯಕ್ರಮವನ್ನು ಅ. 2ರಂದು ಬೆಳಿಗ್ಗೆ 10ಗಂಟೆಗೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ಹಾಗೂ ನೇಕಾರರ ಕುಟುಂಬಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಇರುತ್ತದೆ. ಗಾಯಕ ಪಂಡಿತ್ ರವೀಂದ್ರ ಸೋರಗಾಂವಿ ಅವರಿಂದ ಗಾಂಧಿ ಗೀತ ನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಿಡ್ಲೇಹಳ್ಳಿ ಸಂಸ್ಥಾನಮಠ ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವ ದೇಶಿಕೇಂದ್ರ ಸ್ವಾಮೀಜಿ, ಪವಿತ್ರ ಯೇಸುವಿನ ದೇವಾಲಯದ ಜೇಸುದಾಸ್, ಸಮೀವುಲ್ಲಾ ಖಾನ್, ಸಿ.ಬಿ. ಶಶಿಧರ್ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.