ಹೊಳಲ್ಕೆರೆ: ಗೆಲ್ಲುವ ವರ್ಚಸ್ಸು ಇರುವ ವ್ಯಕ್ತಿಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಟಿಕೆಟ್ ನೀಡಲಾಗುವುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಪಟ್ಟಿ ಬಿಡುಗಡೆ ಆಗಿದೆ. ಆದರೆ ಚುನಾವಣೆಯ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಚುನಾವಣೆ ಘೋಷಣೆ ಆದ ನಂತರ ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಟಿಕೆಟ್ ನೀಡಲಾಗುವುದು. ಮೊದಲೇ ಅಭ್ಯರ್ಥಿಗಳ ಹೆಸರು ಹೇಳುವುದು, ಭರವಸೆ ನೀಡುವುದು ಮಾಡುವುದಿಲ್ಲ. ವರಿಷ್ಠರೊಂದಿಗೆ ಚರ್ಚಿಸಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದರು.

ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜುಲೈ 17ರಂದು ಪಟ್ಟಣದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿದೆ. ಪಕ್ಷದ ಮುಖಂಡರು ತಮ್ಮ ಭಾಗದ ಕಾರ್ಯಕರ್ತರು ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಹೆಚ್ಚು ಕಾರ್ಯಕರ್ತರು ಭಾಗವಹಿಸಿ ಪ್ರತಿಭಟನೆ ಯಶಸ್ವಿಯಾಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಮಾಜಿ ಶಾಸಕ ಎ.ವಿ. ಉಮಾಪತಿ, ಕಾಂಗ್ರೆಸ್ ಜಿಲ್ಲಾ ಸಮಿತಿಯ ಕಾರ್ಯಾಧ್ಯಕ್ಷ ಕೆ.ಎಂ. ಹಾಲಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಹನುಮಂತಪ್ಪ, ಬಿ.ಎಸ್.ರುದ್ರಪ್ಪ, ಕಾಟಿಹಳ್ಳಿ ಶಿವಕುಮಾರ್, ವಕೀಲ ಜಯಣ್ಣ, ಮಧು ಪಾಲೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಶರತ್ ಕುಮಾರ್ ಪಾಟೀಲ್, ಗಂಗಾಧರ್, ಕಿರಣ್ ಕುಮಾರ್, ಪಾಡಿಗಟ್ಟೆ ಸುರೇಶ್ ಹಾಗೂ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.