ಭಾನುವಾರ, ಜುಲೈ 3, 2022
28 °C

ಚಿನ್ನಾಭರಣ ಕಳವು: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ವಿಠಲನಗರದ ಮನೆಯೊಂದರಲ್ಲಿ ₹ 2.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಗಳನ್ನು ಇಲ್ಲಿನ ಪೊಲೀಸರು ಬುಧವಾರ ತುಮಕೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಶಿರಾ ತಾಲ್ಲೂಕಿನ ಹೆಂದೊರೆ ಗ್ರಾಮದ ಶಿವಣ್ಣ ಮತ್ತು ಚಳ್ಳಕೆರೆ ಗಾಂಧಿನಗರದ ಆನಂದ ಬಂಧಿತ ಆರೋಪಿಗಳು.

ಮೇ 10ರಂದು ವಿಠಲನಗರದ ಮನೆಯೊಂದರ ಬಾಗಿಲು ಮುರಿದು ಬೆಳ್ಳಿ, ಬಂಗಾರದ ಅಭರಣವನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದರು.

ತುಮಕೂರಿನಲ್ಲಿ ಅನುಮಾಸ್ಪದವಾಗಿ ತಿರುಗಾಡುತ್ತಿದ್ದವರನ್ನು ಹಿಡಿದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದು ಒಪ್ಪಿಕೊಂಡರು. ಜಿಲ್ಲಾ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಪಿಎಸ್ಐ ಸತೀಶ್‍ನಾಯ್ಕ ತಿಳಿಸಿದ್ದಾರೆ. ಪೊಲೀಸ್‌ ಇನ್‌ಸ್ಪೆಕ್ಟರ್‌ ಎಸ್.ಜೆ. ತಿಪ್ಪೇಸ್ವಾಮಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು