ಮೊಳಕಾಲ್ಮುರು: ಸಾರ್ವಜನಿಕ ಸ್ಥಳಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದ ಕಳ್ಳನನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕುವೆಂಪು ನಗರದ ಎನ್. ಸೂರ್ಯ ಬಂಧಿತ. ಈತನಿಂದ ₹4 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ.

ಈಚೆಗೆ ಇಲ್ಲಿನ ಎಸ್ಬಿಎಂನಲ್ಲಿ ಹಣ ಬಿಡಿಸಿಕೊಂಡು ಹೋಗುತ್ತಿದ್ದ ಮೆಹಬೂಬ್ ಮತ್ತು ಸೋಮಶೇಖರ್ ಎಂಬುವವರ ಗಮನ ಬೇರೆಡೆ ಸೆಳೆದು ಹಣ ಲಪಟಾಯಿಸಲಾಗಿತ್ತು. ಪ್ರತ್ಯೇಕ ಘಟನೆಗಳಲ್ಲಿ ಕ್ರಮವಾಗಿ ₹1 ಲಕ್ಷ ಮತ್ತು ₹5 ಲಕ್ಷ ನಗದು ಕದಿಯಲಾಗಿತ್ತು. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹೆಚ್ಚುವರಿ ಎಸ್ಪಿ ಶಿವಕುಮಾರ್, ಡಿವೈಎಸ್ಪಿ ಸತ್ಯನಾರಾಯಣ, ಸಿಪಿಐ ಆರ್. ನಾಗರಾಜ್ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಪಿಎಸ್ಐ ಮಹೇಶ್ ಹೊಸಪೇಟೆ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಸಿಬ್ಬಂದಿ ಸತೀಶ್, ಖಾದರ್ ಭಾಷಾ, ಶಿವಾನಂದ್, ಪ್ರಭುದೇವ್, ಹುಲುಗಪ್ಪ ಕಾರ್ಯಾಚರಣೆ ತಂಡದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.