ಮಂಗಳವಾರ, ಜೂನ್ 22, 2021
24 °C

ಹಿರಿಯೂರು: ಟಾಟಾ ಏಸ್ ಪಲ್ಟಿಯಾಗಿ ಮೂವರು ಕೂಲಿ ಕಾರ್ಮಿಕರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಚಳ್ಳಕೆರೆ ರಸ್ತೆಯ 103ನೇ ಕ್ರಾಸ್ ಬಳಿ ಟಾಟಾ ಏಸ್ ಪಲ್ಟಿಯಾಗಿ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಮೃತರನ್ನು ಹಿರಿಯೂರಿನ ವೇದಾವತಿ ನಗರದ ತಮಿಳು ಕಾಲೊನಿಯ ಸೆಲ್ವಿ (35),  ದೀಪಿಕಾ (6), ನೀಲಮ್ಮ(29) ಎಂದು ಗುರುತಿಸಲಾಗಿದೆ. ಇನ್ನೂ ಒಂಬತ್ತು ಜನರು ಗಾಯಗೊಂಡಿದ್ದು, ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯೂರಿನ ಕೂಲಿ ಕಾರ್ಮಿಕರನ್ನು ಚಳ್ಳಕೆರೆಗೆ ಕರೆದೊಯ್ಯುವಾಗ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಟಾಟಾ ಏಸ್ ಪಲ್ಟಿ ಆಗಿದೆ. ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು